ಬೆಂಗಳೂರು, ಅ. 9: ಕೋವಿಡ್ ತೀವ್ರ ವಾಗಿ ವ್ಯಾಪಿ ಸುತ್ತಿರುವ ನಡುವೆಯೂ ಶಾಲಾ ಕಾಲೇಜು ಗಳನ್ನು ಯಾವುದೇ ಕಾರಣಕ್ಕೂ ತೆರೆಯುವುದಿಲ್ಲ. ಈ ಬಗ್ಗೆ ಪೆÇೀಷಕರು ಹಾಗೂ ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿ ದ್ದಾರೆ. ಶಾಲೆಗಳನ್ನು ತೆರೆಯುವ ಬಗ್ಗೆ ಸರ್ಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲವೆಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.ಶಾಲೆಗಳನ್ನು ಆರಂಭಿಸುವ ಬಗ್ಗೆ ಪರ ವಿರೋಧ ಚರ್ಚೆ ನಡೆಯು ತ್ತಿದ್ದು, ಈ ಬಗ್ಗೆ ಮಾಧ್ಯಮಗಳು ಕೂಡಾ ಅಭಿಯಾನ ಆರಂಭಿಸಿ ರುವುದನ್ನು ಗಮನಿಸಿರುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ.
ರಾಜಕೀಯ ಪಕ್ಷಗಳ ಮುಖಂಡರು ಶಾಲೆ ತೆರೆಯುವುದರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.