ಕೂಡಿಗೆ, ಅ. 8: ಕೂಡು ಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡತ್ತೂರು ಗ್ರಾಮದಲ್ಲಿ ತಾಲೂಕು ಪಂಚಾಯತ್ನ ಒಂದು ಲಕ್ಷ ರೂ. ಅನುದಾನದಲ್ಲಿ ನಿರ್ಮಾಣ ವಾಗಿದ್ದ ಕಾಂಕ್ರಿಟ್ ರಸ್ತೆಯನ್ನು ಸ್ಥಳೀಯರೋರ್ವರು ಒಡೆದು ಹಾಳು ಮಾಡಿರುತ್ತಾರೆ. ಅಲ್ಲದೆ ಅದಕ್ಕೆ ಹೊಂದಿಕೊಂಡಂತೆ ಕಾಂಪೌಂಡ್ ನಿರ್ಮಾಣ ಮಾಡುತ್ತಿ ದ್ದಾರೆ ಎಂದು ಗ್ರಾಮಸ್ಥರು ದೂರು ಸಲ್ಲಿಸಿದ್ದಾರೆ. ಕಾಂಕ್ರಿಟ್ ರಸ್ತೆಯನ್ನು ಒಡೆದಿರುವುದ ರಿಂದ ಈ ವ್ಯಾಪ್ತಿಯ ಗ್ರಾಮಸ್ಥರಿಗೆ ಮನೆಗಳಿಗೆ ತೆರಳಲು, ವಾಹನ ಸಂಚಾರಕ್ಕೆ ತೊಂದರೆ ಅಗುತ್ತಿದೆ. ಅಲ್ಲದೆ ರಸ್ತೆಯನ್ನು ಒತ್ತುವರಿ ಮಾಡಿ ಕೊಂಡು ತಡೆಗೊಡೆ ನಿರ್ಮಿಸಲು ಮುಂದಾಗಿದ್ದಾರೆ ಎಂದು ಗ್ರಾಮದ 25ಕ್ಕೂ ಹೆಚ್ಚು ಗ್ರಾಮಸ್ಥರು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ದೂರು ಸಲ್ಲಿಸಿದ್ದಾರೆ. ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಣಾಧಿಕಾರಿಗೆ ದೂರವಾಣಿ ಮೂಲಕ ತಿಳಿಸಿದ್ದಾರೆ.
ಸ್ಪಂದಿಸದ್ದರೆ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ಮಾಡಲಾಗುವುದು ಎಂದು ಡಿ.ಆರ್. ಪ್ರಭಾಕರ್, ಗ್ರಾಮಸ್ಥರುಗಳಾದ ಬಸವರಾಜು, ಸಂತೋಷ್ ಗೌಡ, ಸಿ.ಎನ್. ದಿನೇಶ, ಕೃಷ್ಣಗೌಡ, ಈಶ್ವರ, ಸ್ವಾಮಿಗೌಡ, ಮಮತ ಸೇರಿದಂತೆ ಅನೇಕರು ದೂರಿನಲ್ಲಿ ತಿಳಿಸಿದ್ದಾರೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ತಾಲೂಕು ಪಂಚಾಯತ್ ಸದಸ್ಯ ಗಣೇಶ್ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಕ್ರಮಕ್ಕೆ ಸೂಚನೆ ನೀಡಿದ್ದಾರೆ.
ಸ್ಥಳ ಪರಿಶೀಲನೆ: ಅಭಿವೃದ್ಧಿ ಅಧಿಕಾರಿ ಅಯಿಷಾ ಮತ್ತು ಸಿಬ್ಬಂದಿ ವರ್ಗದವರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ತಾಲೂಕು ಪಂಚಾಯತ್ ಅನುದಾನದಲ್ಲಿ ನಡೆದ ಕಾಮಗಾರಿಯಾಗಿದ್ದು, ಒಡೆದಿರುವುದು ಸರಿಯಾದ ಕ್ರಮವಲ್ಲ. ಸರಿಪಡಿಸುವಂತೆ ರಸ್ತೆ ಹಾಳುಮಾಡಿದ ವ್ಯಕ್ತಿಗೆ ಸೂಚನೆಯನ್ನು ನೀಡಿದ್ದಾರೆ.