ಮಡಿಕೇರಿ, ಅ. 9: ಮಂಗಳೂರು ವಿಶ್ವವಿದ್ಯಾನಿಲಯ ದೂರಶಿಕ್ಷಣ ಕಾರ್ಯಕ್ರಮದಡಿಯಲ್ಲಿ ತಾ. 15 ರಿಂದ ಪ್ರಾರಂಭವಾಗಬೇಕಾಗಿದ್ದ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದ್ದು, ತಾ. 27 ರಿಂದ ಪ್ರಾರಂಭವಾಗಲಿದೆ. ಈ ಬಗ್ಗೆ ಪರಿಷ್ಕೃತ ವೇಳಾಪಟ್ಟಿ ಮತ್ತು ಪರೀಕ್ಷಾ ಕೇಂದ್ರಗಳ ವಿವರವು ಮಂಗಳೂರು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ಸೈಟ್ (ತಿತಿತಿ. mಚಿಟಿgಚಿಟoಡಿeuಟಿiveಡಿsiಣಥಿ.ಚಿಛಿ.iಟಿ)ನಲ್ಲಿ ಲಭ್ಯವಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.