ಮಡಿಕೇರಿ, ಸೆ. 9 : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಪರಿಶಿಷ್ಟ ಪಂಗಡದ ಜನಾಂಗದವರಿಗೆ ಪ್ರೋತ್ಸಾಹಧನ ಮಂಜೂರು ಮಾಡುವ ಸಂಬಂಧ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಪರಿಶಿಷ್ಟ ಪಂಗಡದ ಫಲಾನುಭವಿಗಳು ತಿತಿತಿ.ಣತಿ. ಞಚಿಡಿ.ಟಿiಛಿ.iಟಿ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಕಚೇರಿ ವೇಳೆಯಲ್ಲಿ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿ ಕಾರಿಗಳ ಕಚೇರಿ ಪೊನ್ನಂಪೇಟೆ 08274-261261, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ 08276-281115 ಹಾಗೂ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ 08272-223552 ಇವರನ್ನು ಸಂಪರ್ಕಿಸುವಂತೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಯೋಜನಾ ಸಮನ್ವಯಾಧಿಕಾರಿ ಶಿವಕುಮಾರ್ ತಿಳಿಸಿದ್ದಾರೆ.

ಯೋಜನೆಯ ಹೆಸರು: ಕಾನೂನು ಪದವೀಧರ ಶಿಷ್ಯ ವೇತನ, ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ಸರಳವಾಗಿ ವಿವಾಹ ಮಾಡಿಕೊಳ್ಳುವ ಪರಿಶಿಷ್ಟ ಪಂಗಡಕ್ಕೆ ಸೇರಿದ ದಂಪತಿಗಳಿಗೆ ಸರಳ ವಿವಾಹ ಯೋಜನೆಯಡಿ ಪ್ರೋತ್ಸಾಹಧನ, ಪರಿಶಿಷ್ಟ ಪಂಗಡದ ಯುವಕ ಯುವತಿಯರು ಪರಿಶಿಷ್ಟ ಪಂಗಡದ ಸಮುದಾಯದ ಒಳಗೆ ಅಂತರ್‍ಜಾತಿ ವಿವಾಹವಾದಲ್ಲಿ ಅಂತಹವರಿಗೆ ಪ್ರೋತ್ಸಾಹಧನ, ಪರಿಶಿಷ್ಟ ಪಂಗಡದ ವಿಧವೆಯರು ಮರು ವಿವಾಹವಾದಲ್ಲಿ ಅಂತಹವರಿಗೆ ಪ್ರೋತ್ಸಾಹಧನ, ಪರಿಶಿಷ್ಟ ಪಂಗಡದವರು ಅಂತರ್ಜಾತಿ ವಿವಾಹವಾದಲ್ಲಿ ಅಂತಹವರಿಗೆ ಪ್ರೋತ್ಸಾಹಧನ ಮಂಜೂರಾತಿ ಕಾರ್ಯಕ್ರಮಗಳಿವೆ.