ಗೋಣಿಕೊಪ್ಪಲು, ಅ. 8: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮನೆಯ ಮೇಲೆ ನಡೆದಿರುವ ಸಿಬಿಐ ದಾಳಿಯನ್ನು ಖಂಡಿಸಿರುವುದಾಗಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೇಚಮಾಡ ಸರಿತಾ ಪೂಣಚ್ಣ ಪತ್ರಿಕಾ ಹೇಳಿಕೆ ಯಲ್ಲಿ ತಿಳಿಸಿದ್ದಾರೆ. ರಾಜ್ಯದಲ್ಲಿ ಮುಂದಿನ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂಬ ಭಯದಿಂದಾಗಿ ಈ ರೀತಿಯಲ್ಲಿ ಸಿಬಿಐ ದಾಳಿ ನಡೆಸಿದೆ ಎಂದು ಸರಿತಾಪೂಣಚ್ಚ ಟೀಕಿಸಿದ್ದಾರೆ.