ಕೂಡಿಗೆ, ಅ. 9: ಅರಣ್ಯ ಇಲಾಖೆ, ಗ್ರಾಮ ಪಂಚಾಯತಿ ಹೆಬ್ಬಾಲೆಯ ಸಹಯೋಗದಲ್ಲಿ ಹೆಬ್ಬಾಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ಹತ್ತಿರ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನಿರ್ಮಾಣಗೊಂಡಿರುವ ಉದ್ಯಾನವನದ ಆವರಣದಲ್ಲಿ 66ನೇ ವನ್ಯಜೀವಿ ಸಪ್ತಾಹ ಆಚರಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯತಿ ಅಡಳಿತ ಅಧಿಕಾರಿ ಸೀಮಾ ನೆರವೇರಿಸಿ ವನ್ಯಜೀವಿ ಸಂರಕ್ಷಣಾ ವಿಷಯದ ಬಗ್ಗೆ ಮಾಹಿತಿ ನೀಡಿದರು.
ಹೆಬ್ಬಾಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಭರತ್ ಮತ್ತು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಾಕೇಶ್ ಮಾತಾನಾಡಿದರು. ಈ ಸಂದರ್ಭ ವಿವಿಧ ಹಣ್ಣಿನ ಗಿಡಗಳು ಮತ್ತು ನೆರಳು ಮರದ ಗಿಡಗಳನ್ನು ನೆಡಲಾಯಿತು. ಕುಶಾಲನಗರ ಅರಣ್ಯ ತರಬೇತಿ ಕೇಂದ್ರದ ಪ್ರಶಿಕ್ಷಣಾರ್ಥಿಗಳು, ಆಸ್ಪತ್ರೆಯ ಸಿಬ್ಬಂದಿ, ಗ್ರಾಮ ಪಂಚಾಯಿತಿ ಸಿಬ್ಬಂದಿ ಸೇರಿದಂತೆ ಸಾರ್ವಜನಿಕರು ಹಾಜರಿದ್ದರು.