ಕೂಡಿಗೆ, ಅ. 10: ಜಿಲ್ಲೆಯ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ವೇದಿಕೆಯ ಅಧ್ಯಕ್ಷರಾಗಿ ಡಿ.ಆರ್. ಪ್ರಭಾಕರ್ ಅವರು ಅವಿರೋಧ ವಾಗಿ ಆಯ್ಕೆಯಾಗಿದ್ದಾರೆ. ಕುಶಾಲನಗರದ ಕುರುಬ ಸಮಾಜದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ಮಹೇಶ್ ಮತ್ತು ಪುಟ್ಟಸ್ವಾಮಿ, ಕಾರ್ಯದರ್ಶಿಯಾಗಿ ಬಿ.ಎಸ್. ಮಂಜುನಾಥ, ಸಹ ಕಾರ್ಯದರ್ಶಿಯಾಗಿ ಭರಮಣ್ಣ ಬೆಟಗೇರಿ, ಸಂಘಟನಾ ಕಾರ್ಯದರ್ಶಿಯಾಗಿ ಎ. ಜಯರಾಮ್, ಖಜಾಂಜಿಯಾಗಿ ಟಿ.ಕೆ. ಕುಮಾರ್ ಆಯ್ಕೆಗೊಂಡಿದ್ದಾರೆ.