ಮಡಿಕೇರಿ, ಅ. 10: ಪ್ರಥಮ ಶ್ರೇಣಿಯಲ್ಲಿ ಮೆಟ್ರಿಕ್ ನಂತರದ ವಿವಿಧ ಕೋರ್ಸುಗಳಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಇಲಾಖಾ ವೆಬ್ ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿನಲ್ಲಿ ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ತಾ. 31 ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು ಪಿ.ಯು.ಸಿ., ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್, ವೈದ್ಯಕೀಯ ಕೋರ್ಸ್‍ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಪ್ರತಿ ಸೆಮಿಸ್ಟರ್‍ನಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕಗಳಿಸಿರಬೇಕು. ಹೆಚ್ಚಿನ ಮಾಹಿತಿಗೆ ಸಮಾಜ ಕಲ್ಯಾಣ ಇಲಾಖೆಯ ಕಚೇರಿ ವೇಳೆ ಮಾಹಿತಿ ಪಡೆಯಬಹುದಾಗಿದೆ.