ಮಡಿಕೇರಿ, ಅ. 10: ಜಿಲ್ಲೆಯಲ್ಲಿ ಕೋವಿಡ್ ಸಂಬಂಧ 1 ಸಾವು ವರದಿಯಾಗಿದೆ. ಮಡಿಕೇರಿ ನಗರದ ಮುತ್ತಪ್ಪ ದೇವಸ್ಥಾನ ಬಳಿಯ ನಿವಾಸಿ 75 ವರ್ಷದ ಪುರುಷರೊಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟ ಪ್ರಕರಣಗಳ ಸಂಖ್ಯೆ 54 ಕ್ಕೇರಿದೆ. ಜಿಲ್ಲೆಯಲ್ಲಿ ಹೊಸದಾಗಿ 113 ಕೊರೊನಾ ಪ್ರಕರಣಗಳು ವರದಿಯಾಗಿವೆ. ಇದುವರೆಗೆ 3652 ಪ್ರಕರಣಗಳು ವರದಿಯಾಗಿದ್ದು, 3014 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 54 ಮಂದಿ ಸಾವನ್ನಪ್ಪಿದ್ದು 584 ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ 133 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, 77 ಮಂದಿ ಕೋವಿಡ್ ಕೇರ್ ಸೆಂಟರ್ ನಲ್ಲಿ, 374 ಮಂದಿ ಹೋಮ್ ಐಸೋಲೇಷನ್ ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ 564 ನಿಯಂತ್ರಿತ ವಲಯಗಳಿವೆ.