ಮಡಿಕೇರಿ, ಅ. 12: ಇತ್ತೀಚೆಗೆ ನಡೆದ ಸಿಂಡಿಕೇಟ್ ಸಭೆಯಲ್ಲಿ ಸಿಂಡಿಕೇಟ್ ಸದಸ್ಯರು ಹಾಗೂ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಡಾ. ಪಾರ್ವತಿ ಅಪ್ಪಯ್ಯ ಅವರು ಮಂಗಳೂರು ವಿಶ್ವವಿದ್ಯಾನಿಲಯದ ಕಾಲೇಜುಗಳಲ್ಲಿ ಸರ್ಟಿಫಿಕೇಟ್, ಡಿಪ್ಲೊಮಾ, ಅಡ್ವಾನ್ಸ್ಡ್ ಡಿಪ್ಲೊಮಾ ಇನ್ ಕೊಡವ ಭಾಷೆ ಕೋರ್ಸ್ಗಳನ್ನು ಅಳವಡಿಸಬೇಕೆಂದು ನೀಡಿದ ಪ್ರಸ್ತಾವನೆಯನ್ನು ಅಂಗೀಕರಿಸಲಾಗಿದೆ ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಡಾ. ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ತಿಳಿಸಿದ್ದಾರೆ.