ಮಡಿಕೇರಿ, ಅ. 12: 2020ರ ಪಿಜಿಸಿಇಟಿ ಮತ್ತು ಡಿಸಿಇಟಿ (Pಉಅಇಖಿ& ಆಅಇಖಿ) ಪರೀಕ್ಷೆಯು (ಎಂ.ಸಿ.ಎ & ಎಂ.ಬಿ.ಎ.ಎಂ.ಟೆಕ್) ಇತ್ಯಾದಿ ಪ್ರವೇಶಾತಿ ಪರೀಕ್ಷೆಯು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ತಾ. 13 ಮತ್ತು 14 ರಂದು ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಕೋವಿಡ್ ಪಾಸಿಟಿವ್ ವಿದ್ಯಾರ್ಥಿಗಳು ಕೂಡ ಈ ಪರೀಕ್ಷೆಯನ್ನು ಬರೆಯುವ ಅವಕಾಶವನ್ನು ಇಲಾಖೆಯು ಕಲ್ಪಿಸಿರುತ್ತದೆ. ಈ ಅಂಶಗಳ ಹಿನ್ನೆಲೆ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣವಿರುವ ವಿದ್ಯಾರ್ಥಿಗಳು ಇದ್ದಲ್ಲಿ/ ಕಂಟೈನ್ಮೆಟ್ ಪ್ರದೇಶದಲ್ಲಿರುವ ವಿದ್ಯಾರ್ಥಿಗಳ ಮಾಹಿತಿಯನ್ನು ಮುಂಚಿತವಾಗಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಒದಗಿಸಬಹುದು.

ಈ ವಿದ್ಯಾರ್ಥಿಗಳು ಸುಗಮವಾಗಿ ಪರೀಕ್ಷೆಯನ್ನು ಬರೆಯಲು ಸೂಕ್ತ ವ್ಯವಸ್ಥೆಯನ್ನು ಜಿಲ್ಲಾಡಳಿತವೂ ಮಾಡಿರುತ್ತದೆ. ಆದ ಕಾರಣ ಕೋವಿಡ್ ಪ್ರಕರಣಗಳ ಸಂಬಂಧ ಇಲಾಖೆಗೆ ಮುಂಚಿತವಾಗಿ ವಿದ್ಯಾರ್ಥಿಗಳ ಪೂರ್ಣ ವಿವರವನ್ನು ಕಚೇರಿಯ ಜಜಠಿue.mಚಿಜiಞeಡಿi@gmಚಿiಟ.ಛಿom ಈ ಮೇಲ್ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ವಿವರಗಳಿಗೆ ಉಪನಿರ್ದೇಶಕರ ಮೊಬೈಲ್ ಸಂಖ್ಯೆ 9901307898ಗೆ ಹಾಗೂ ಜಿಲ್ಲಾಡಳಿತ ವತಿಯಿಂದ ತೆರಯಲಾದ ಜಿಲ್ಲಾ ವಿಪತ್ತು ನಿರ್ವಹಣಾ ನಿಸ್ತುಂತು ಕೇಂದ್ರದ ಸಂಪರ್ಕ ಸಂಖ್ಯೆ- 08272-221077 ಹಾಗೂ ಈ ಪರೀಕ್ಷಾ ಕಾರ್ಯಕ್ಕೆ ನೋಡಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಶಿವಕುಮಾರ್ ಸಿ., ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಮಡಿಕೇರಿ, ಕೊಡಗು ಜಿಲ್ಲೆ ಸಂಪರ್ಕ ಸಂಖ್ಯೆ 9741999571 ಗೆ ಸಂಬಂಧಿಸಿದ ವಿದ್ಯಾರ್ಥಿಗಳು ಹಾಗೂ ಪೋಷಕರುಗಳು ಮಾಹಿತಿಯನ್ನು ನೀಡುವಂತೆ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ.ಎಂ. ಮಹಾಲಿಂಗಯ್ಯ ಅವರು ತಿಳಿಸಿದ್ದಾರೆ. 2 ದಿನಗಳ ಕಾಲ 400 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ನಿಷೇಧಾಜ್ಞೆ: ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಅವ್ಯವಹಾರಗಳಿಲ್ಲದೆ ಸುಗಮವಾಗಿ ಪಿಜಿಸಿಇಟಿ ಮತ್ತು ಡಿಸಿಇಟಿ ಪರೀಕ್ಷೆ ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರಡಿ ದತ್ತವಾದ ಅಧಿಕಾರದಂತೆ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಆದೇಶ ಹೊರಡಿಸಿದ್ದಾರೆ.

ಕೋವಿಡ್ ಸಂಬಂಧಿತ ಎಸ್‍ಒಪಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವುದು. ಪರೀಕ್ಞಾ ಕೇಂದ್ರದ ಆವರಣದೊಳಗೆ ಸಂಬಂಧಪಡದ ಯಾವುದೇ ವ್ಯಕ್ತಿಗಳ ಪ್ರವೇಶ ನಿಷೇಧಿಸಿದೆ. ಯಾವುದೇ ನಿಯಮಬಾಹಿರ ಚಟುವಟಿಕೆ. ಅವ್ಯವಹಾರಗಳಿಗೆ ಆಸ್ಪದವಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.