ಸುಂಟಿಕೊಪ್ಪ, ಅ. 12: ಕೊಡ್ಲಿಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದ ಜಾನಕಮ್ಮ ಅವರನ್ನು ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕರ ಸಂಘದ ವತಿಯಿಂದ ಅಧ್ಯಕ್ಷ ಸಿ.ಟಿ. ಸೋಮಶೇಖರ್ ಸನ್ಮಾನಿಸಿದರು. ತಾಲೂಕು ಅಧ್ಯಕ್ಷ ಡಿ.ಪಿ. ಧರ್ಮಪ್ಪ, ಶಿಕ್ಷಕರು ಪಾಲ್ಗೊಂಡಿದ್ದರು.