ವೀರಾಜಪೇಟೆ, ಅ. 12: ವೀರಾಜಪೇಟೆ ಬಳಿಯ ಕೊಳತ್ತೂಡು ಬೈಗೋಡು ಗ್ರಾಮದ ಎಸ್.ರಾಜಾ ಎಂಬವರ ಲೈನ್ ಮನೆಯಲ್ಲಿ ವಾಸವಿದ್ದ ಎರವರ ಸುರೇಶ್ ಎಂಬವರ ಪತ್ನಿ ಪುಷ್ಪಾ (40) ಎಂಬಾಕೆ ನಿನ್ನೆ ರಾತ್ರಿ ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವೀರಾಜಪೇಟೆ ಗ್ರಾಮಾಂತರ ಪೊಲೀಸರಿಗೆ ದೊರೆತ ದೂರಿನ ಮೇರೆ ಪ್ರಕರಣ ದಾಖಲಿಸಿ ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ವಾರೀಸುದಾರರಿಗೆ ಒಪ್ಪಿಸಿದ್ದಾರೆ.

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ನಿನ್ನೆ ತೋಟದ ಮಾಲೀಕರಿಂದ ಸಂಬಳ ಪಡೆದು ಗೋಣಿಕೊಪ್ಪ ಸಂತೆಗೆ ಹೋಗಿ ಬಂದ ನಂತರ ಆತ್ಮಹತ್ಯೆ ಮಾಡಿಕೊಂಡಿರು ವುದಾಗಿ ಪೊಲೀಸರು ತಿಳಿಸಿದ್ದಾರೆ.