ಮಡಿಕೇರಿ, ಅ. 12: ವಸತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ತಾ. 16 ಮತ್ತು 17 ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ತಾ. 16 ರಂದು ರಾತ್ರಿ 7.30 ಗಂಟೆಗೆ ಭಾಗಮಂಡಲದಲ್ಲಿ ತೀರ್ಥೋದ್ಭವ ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.

ತಾ. 17 ರಂದು 7.03 ಗಂಟೆಗೆ ಜರುಗುವ ತಲಕಾವೇರಿ ತೀರ್ಥೋದ್ಭವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಸಂಜೆ 4.30 ಗಂಟೆಗೆ ಮಡಿಕೇರಿ ಲೋಕೋಪಯೋಗಿ ಇಲಾಖೆಯ ವಿಭಾಗ ಮತ್ತು ಉಪ ವಿಭಾಗ ಕಚೇರಿ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5.30 ಗಂಟೆಗೆ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎಸ್.ಬಿ. ನರೇಂದ್ರ ತಿಳಿಸಿದ್ದಾರೆ.