ಮಡಿಕೇರಿ, ಅ. 12: ಹಾಕತ್ತೂರು ಗ್ರಾ.ಪಂ.ಗೊಳಪಟ್ಟ 25ಕ್ಕೂ ಹೆಚ್ಚು ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆಗೊಂಡರು.

ಪಕ್ಷದ ಜಿಲ್ಲಾ ಕಚೇರಿಯಲ್ಲಿ ಮಡಿಕೇರಿ ತಾಲ್ಲೂಕು ಅಧ್ಯಕ್ಷ ಬಲ್ಲಾಚಂಡ ಗೌತಮ್ ನೇತೃತ್ವದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಹಾಕತ್ತೂರಿನ ಲೋಕೇಶ್ ಹಾಗೂ ನಾಗೇಶ್ ಮುಂದಾಳತ್ವದಲ್ಲಿ ಸೇರ್ಪಡೆಗೊಂಡ ನೂತನ ಕಾರ್ಯಕರ್ತರನ್ನು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್ ಶಾಲು ಹೊದಿಸಿ ಪಕ್ಷದ ಧ್ವಜ ನೀಡಿ ಬರಮಾಡಿಕೊಂಡರು.

ಯುವ ಪ್ರಧಾನ ಕಾರ್ಯದರ್ಶಿ ಜಾಶಿರ್, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ಲೀಲಾ ಶೇಷಮ್ಮ, ಮಹಿಳಾ ಘಟಕದ ನಗರಾಧ್ಯಕ್ಷೆ ಸುನಂದ, ಜಿಲ್ಲಾ ಯುವ ವಕ್ತಾರ ಜಿನಸ್, ಯುವ ಘಟಕ ತಾಲೂಕು ಅಧ್ಯಕ್ಷ ಅಭೀತ್ ಅಪ್ಪಯ್ಯ ಇದ್ದರು.