ಕೂಡಿಗೆ, ಅ. 11: ಕೂಡು ಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡುಮಂಗ ಳೂರು ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಮಹಿಳೆಯರಿಗೆ ಸೀಗಬೇಕಾದ ಪೌಷ್ಟಿಕಾಹಾರಗಳನ್ನು ಒಳಗೊಂಡಂತೆ ಮಹಿಳೆಯರಿಗೆ ಸೀಗಬೇಕಾದ ಸೌಲಭ್ಯಗಳನ್ನು ನಿಯಮನುಸಾರವಾಗಿ ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಅಂಗನವಾಡಿ ಕೇಂದ್ರದಲ್ಲಿ ಫಲಾನುಭವಿಗಳಿಗೆ ದೊರಕುವ ಎಲ್ಲಾ ವಸ್ತುಗಳನ್ನು ವಿತರಣೆ ಮಾಡಬೇಕು ಅಲ್ಲದೇ ಅಂಗನವಾಡಿ ಕಾರ್ಯಕರ್ತೆ ರು ನಿಯಮನುಸಾರ ವಸ್ತುಗಳನ್ನು ವಿತರಣೆ ಮಾಡಬೇಕು ಎಂದು ಗ್ರಾಮಸ್ಥರು ಅಗ್ರಹಿಸಿದ್ದಾರೆ.

ಗ್ರಾಮಸ್ಥರ ಮನವಿಯ ಮೇರೆಗೆ ಆಗಮಿಸಿದ ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಕೇಂದ್ರಕ್ಕೆ ಭೇಟಿ ನೀಡಿ ಸಮರ್ಪಕವಾಗಿ ನಿಯಮನು ಸಾರವಾಗಿ ವಿತರಣೆ ಮಾಡುವಂತೆ ಸೂಚನೆ ನೀಡಿದರು.