ಮಡಿಕೇರಿ, ಅ. 17: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮತ್ತೊಂದು ಸಾವು ವರದಿಯಾಗಿದೆ. ಮಡಿಕೇರಿಯ ಪುಟಾಣಿನಗರದ ನಿವಾಸಿ 50 ವರ್ಷದ ಪುರುಷರೊಬ್ಬರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 61 ಕ್ಕೇರಿದೆ.

ಜಿಲ್ಲೆಯಲ್ಲಿ ಹೊಸದಾಗಿ 86 ಕೊರೊನಾ ಪ್ರಕರಣಗಳು ವರದಿಯಾಗಿವೆ. ಇದುವರೆಗೆ 4318 ಪ್ರಕರಣಗಳು ವರದಿಯಾಗಿದ್ದು, 3614 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 61 ಮಂದಿ ಸಾವನ್ನಪ್ಪಿದ್ದು 643 ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ 91 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, 28 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 524 ಮಂದಿ ಹೋಮ್ ಐಸೋಲೇಷನ್‍ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ 536 ನಿಯಂತ್ರಿತ ವಲಯಗಳಿವೆ.