ಮಡಿಕೇರಿ, ಅ. 16 : ಜಿಲ್ಲಾಡಳಿತ ಹಾಗೂ ಲೋಕೋಪಯೋಗಿ ಇಲಾಖೆ ವತಿಯಿಂದ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಲೋಕೋಪಯೋಗಿ ಇಲಾಖೆಯ ಕಚೇರಿ ಕಟ್ಟಡದ ಉದ್ಘಾಟನಾ ಸಮಾರಂಭವು ತಾ. 17 ರಂದು (ಇಂದು) ಸಂಜೆ 4.30 ಗಂಟೆಗೆ ನಡೆಯಲಿದೆ.

ವಸತಿ ಸಚಿವ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಮತ್ತು ಕೆ.ಜಿ.ಬೋಪಯ್ಯ, ಸಂಸದ ಪ್ರತಾಪ್ ಸಿಂಹ, ಜಿ.ಪಂ.ಅಧ್ಯಕ್ಷ ಬಿ.ಎ.ಹರೀಶ್, ವಿಧಾನಪರಿಷತ್ ಶಾಸಕರಾದ ಎಂ.ಪಿ.ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ ಮೊದಲಾದವರು ಪಾಲ್ಗೊಳ್ಳಲಿದ್ದಾರೆ.