ಕೂಡಿಗೆ, ಅ. 16: ಕೂಡಿಗೆಯ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಏರಿಕೆಯಾದ ಕಾರಣ ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ಪ್ರಯತ್ನದಲ್ಲಿ ರಾಜ್ಯ ಸರಕಾರದ ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ರೂ. 1 ಕೋಟಿ ವೆಚ್ಚದಲ್ಲಿ ಸುಸಜ್ಜಿತ ತರಗತಿಯ ಕಟ್ಟಡ ಉದ್ಘಾಟನೆಗೆ ಸಿದ್ಧಗೊಂಡಿದೆ

ಕಾಲೇಜುವಿನಲ್ಲಿ ವಿದ್ಯಾರ್ಥಿಗಳ ಸಂಖ್ಯೆಯು ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು, ಕೊಠಡಿ ಕೊರತೆ ಉಂಟಾಗಿತ್ತು. ಈ ಸಮಸ್ಯೆಗಳನ್ನು ಬಗೆಹರಿಸಲು ನೂತನ ನಾಲ್ಕು ಕೊಠಡಿಗಳು, ಶೌಚಾಲಯಗಳ ವ್ಯವಸ್ಥೆ ಆಗಿದೆ. ಸುಸಜ್ಜಿತ ಪ್ರಯೋಗಾಲಯ ತೆರೆಯಲು ಮತ್ತು ವಿದ್ಯಾರ್ಥಿಗಳ ಭೋದನೆಗೆ ಅನುಕೂಲವಾದ ಕಟ್ಟಡಗಳ ನಿರ್ಮಾಣ ಕಾರ್ಯ ನಡೆದಿದೆ. ಈ ಕಾಮಗಾರಿಯು ಶೇ. 90 ರಷ್ಟು ಪೂರ್ಣಗೊಂಡಿದ್ದು, ಉದ್ಘಾಟನೆಗೆ ಸಿದ್ಧಗೊಳ್ಳುತ್ತಿದೆ.