ಮಡಿಕೇರಿ, ಅ. 16: ಜಾಗತಿಕ ಕೊರೊನಾ ಸೋಂಕಿಗೆ ಸಂಪೂರ್ಣ ತಡೆಯೊಡ್ಡುವ ಮೂಲಕ ಕೊಡಗು ಜಿಲ್ಲೆಯನ್ನು ಇಡೀ ದೇಶದಲ್ಲಿ ಕೊರೊನಾ ಮುಕ್ತ ಮಾದರಿ ಜಿಲ್ಲೆಯನ್ನಾಗಿಸೋಣ ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡರ್ ಅವರು ಕರೆ ನೀಡಿದ್ದಾರೆ. ಮಡಿಕೇರಿ, ಅ. 16: ಜಾಗತಿಕ ಕೊರೊನಾ ಸೋಂಕಿಗೆ ಸಂಪೂರ್ಣ ತಡೆಯೊಡ್ಡುವ ಮೂಲಕ ಕೊಡಗು ಜಿಲ್ಲೆಯನ್ನು ಇಡೀ ದೇಶದಲ್ಲಿ ಕೊರೊನಾ ಮುಕ್ತ ಮಾದರಿ ಜಿಲ್ಲೆಯನ್ನಾಗಿಸೋಣ ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡರ್ ಅವರು ಕರೆ ನೀಡಿದ್ದಾರೆ. ಅವರು, ಆ ದಿಸೆಯಲ್ಲಿ ಪ್ರತಿಯೊಬ್ಬರು ಆರೋಗ್ಯವನ್ನು ಕಾಪಾಡಿ ಕೊಳ್ಳಬೇಕೆಂದು ತಿಳಿ ಹೇಳಿದರು. ಬದುಕಿನಲ್ಲಿ ಜಾಗತಿಕ ಕೊರೊನಾ ದಿಂದ ಬದುಕು ಕಾಪಾಡಿ ಕೊಳ್ಳಬೇಕಾದರೆ ಸಾಮಾಜಿಕ ಅಂತರ ಕಾಯ್ದುಕೊಂಡು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಲ್ಲರೂ ಸ್ವಚ್ಛತೆಗೆ ಆದ್ಯತೆ ನೀಡುವಂತಾಗಬೇಕಿದೆ ಎಂದ ಅವರು, ಆರೋಗ್ಯದ ಜೀವನವೇ ನಮ್ಮ ವ್ಯಕ್ತಿತ್ವಕ್ಕೆ ಶೋಭೆಯೆಂದು ನುಡಿದರು. ಕೊಡಗು ಜಿಲ್ಲೆಯಲ್ಲಿ ಕೊರೊನಾ ವೈರಸ್ ಇಲ್ಲದಂತೆ ಮಾಡಲು ಪ್ರತಿಯೊಬ್ಬರೂ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕಿದೆ. ಆ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಅವರು ಹೇಳಿದರು. ಅಗತ್ಯವಿದ್ದಾಗ ಮಾತ್ರ ಮನೆಯಿಂದ ಹೊರಬರಬೇಕು ಮತ್ತು ಪ್ರಯಾಣ ಕೈಗೊಳ್ಳಬೇಕು. ಜನ ಸಮೂಹ ಇರುವ ಕಡೆ ಹೋಗುವುದನ್ನು ಕಡಿಮೆ ಮಾಡಬೇಕು ಎಂದು ಅವರು ತಿಳಿಸಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ
(ಮೊದಲ ಪುಟದಿಂದ) ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನಿಸ ಅವರು ಮಾತನಾಡಿ ಜ್ವರ, ಸುಸ್ತು, ಒಣಕೆಮ್ಮು, ಗಂಟಲು ನೋವು ಇತರ ಲಕ್ಷಣಗಳು ಕಂಡು ಬಂದಲ್ಲಿ ವೈದ್ಯರಲ್ಲಿ ತೋರಿಸಿಕೊಳ್ಳಬೇಕು. ಸಾಮಾಜಿಕ ಅಂತರ ಕಾಯ್ದುಕೊಂಡರೆ ಸೋಂಕಿನ ಸಂಖ್ಯೆಯನ್ನು ಗರಿಷ್ಠ 80 ರಷ್ಟು ಕಡಿಮೆ ಮಾಡಬಹುದು ಎಂದು ಅವರು ತಿಳಿಸಿದರು.
ಒಂದನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಪಿ.ಎಸ್.ಚಂದ್ರಶೇಖರ, ಹಿರಿಯ ಸಿವಿಲ್ ನ್ಯಾಯಾಧೀಶರಾದ ವಿಜಯ ಕುಮಾರ್, ವಕೀಲರ ಸಂಘದ ಅಧ್ಯಕ್ಷ ಕೆ.ಎಸ್.ಕವನ್, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಭಗಟಿ, ತಾಲೂಕು ಕಾರ್ಮಿಕ ಅಧಿಕಾರಿ ಯತ್ನಟ್ಟಿ, ಕಾನೂನು ಸೇವಾಪ್ರಾಧಿಕಾರದ ಆಡಳಿತ ಸಹಾಯಕ ಜಯಪ್ಪ, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಇತರರು ಇದ್ದರು. ಆಟೋ ಮೂಲಕ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು.