ಮಡಿಕೇರಿ, ಅ.17 : ನಗರದಲ್ಲಿ ನೂತನವಾಗಿ 4.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಲೋಕೋಪಯೋಗಿ ಇಲಾಖೆ ವಿಭಾಗ ಮತ್ತು ಉಪ-ವಿಭಾಗ ಮಟ್ಟದ ಕಚೇರಿ ಕಟ್ಟಡವನ್ನು ವಸತಿ ಮತ್ತು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಉದ್ಘಾಟಿಸಿದರು.

ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಜಿ.ಪಂ. ಸಿ.ಇ.ಒ ಭಂವರ್ ಸಿಂಗ್ ಮೀನಾ, ಡಿಎಫ್‍ಒ ಪ್ರಭಾಕರನ್, ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡು, ಡಿ.ಎಚ್.ಒ ಡಾ. ಕೆ. ಮೋಹನ್, ಲೋಕೋಪಯೋಗಿ ಇಲಾಖೆ ಹಾಸನ ವೃತ್ತದ ಅಧೀಕ್ಷಕ ಇಂಜಿನಿಯರ್ ಜಿ.ಟಿ. ವೆಂಕಟೇಶ್, ಕಾರ್ಯಪಾಲಕ ಇಂಜಿನಿಯರ್ ಮದನ್ ಮೋಹನ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಶಿವರಾಂ, ಮೋಹನ್ ಕುಮಾರ್, ಸುರೇಶ್, ತಹಶೀಲ್ದಾರ್ ಮಹೇಶ್ ಇತರರು ಇದ್ದರು.