ಮಡಿಕೇರಿ, ಅ. 16: ಕೊಡಗು ಜಿಲ್ಲೆಯಲ್ಲಿ ಮಾದಕ ವಸ್ತು ಸಾಗಾಟ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿಯೊಬ್ಬನನ್ನು ಪತ್ತೆಹಚ್ಚುವಲ್ಲಿ ಕೊಡಗು ಜಿಲ್ಲಾ ಡಿಸಿಐಬಿ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಆಗಸ್ಟ್ 28ರಂದು ರಾತ್ರಿ ಮಡಿಕೇರಿ ನಗರ ವ್ಯಾಪ್ತಿಯ ರಾಜಾಸೀಟ್ ಮುಖ್ಯ ರಸ್ತೆಯಲ್ಲಿ ಸುಮಾರು 9 ಲಕ್ಷ ರೂ. ಮೌಲ್ಯದ 300 ಗ್ರಾಂ ಮಾದಕ ವಸ್ತು “ಂmಠಿeಣಚಿmiಟಿe” ಸಾಗಾಟ ಪ್ರಕರಣವನ್ನು ಪತ್ತೆಹಚ್ಚಿದ ಡಿಸಿಐಬಿ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿಯವರು ಪ್ರಕರಣಕ್ಕೆ ಸಂಬಂಧಿಸಿ ವಿದೇಶಿ ಪ್ರಜೆ ಸೇರಿದಂತೆ ಒಟ್ಟು 7 ಜನ ಆರೋಪಿಗಳನ್ನು ಬಂಧಿಸಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿ ತಾ. 15 ರಂದು ಮಾದಕ ವಸ್ತು “ಂmಠಿeಣಚಿmiಟಿe” ಸಾಗಾಟ ಜಾಲದ ಪ್ರಮುಖ ವ್ಯಕ್ತಿಯಾಗಿ ತಲೆಮರೆಸಿಕೊಂಡಿದ್ದ ಮಡಿಕೇರಿ ತಾಲೂಕು ಅಯ್ಯಂಗೇರಿಯ ಮತ್ತೋರ್ವ ಆರೋಪಿ ಟಿ.ಇ. ಮುಸ್ತಾಫ (34) ಈತನನ್ನು ದೇರಳಕಟ್ಟೆಯಲ್ಲಿ ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.ಪೆÇಲೀಸ್ ಅಧೀಕ್ಷಕಿ ಕ್ಷಮಾ ಮಿಶ್ರಾ ಅವರ ಮಾರ್ಗದರ್ಶನದಲ್ಲಿ ಡಿಸಿಐಬಿ ಇನ್ಸ್‍ಪೆಕ್ಟರ್ ಎನ್. ಕುಮಾರ್ ಆರಾಧ್ಯ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದು, ಎಎಸ್‍ಐ ಹಮೀದ್, ಸಿಬ್ಬಂದಿಗಳಾದ ಬಿ.ಎಲ್. ಯೊಗೇಶ್ ಕುಮಾರ್, ಎಂ.ಎನ್. ನಿರಂಜನ್, ಕೆ.ಆರ್.ವಸಂತ, ಬಿ.ಜೆ. ಶರತ್ ರೈ, ಎ.ಆರ್. ಸುರೇಶ್, ವಿ.ಜಿ ವೆಂಕಟೇಶ್, ಕೆ.ಎಸ್. ಅನಿಲ್ ಕುಮಾರ್, ಚಾಲಕ ಕೆ.ಎಸ್. ಶಶಿಕುಮಾರ್ ಮತ್ತು ಸಿಡಿಆರ್ ಸೆಲ್‍ನ ರಾಜೇಶ್ ಹಾಗೂ ಗಿರೀಶ್ ಅವರುಗಳು ಭಾಗವಹಿಸಿದ್ದರು.

ಕೊಡಗು ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಟ ಹಾಗೂ ಬಳಕೆಯ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿದ್ದು ಪೆÇಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಗುಪ್ತವಾಗಿ ಮಾಹಿತಿ ನೀಡಿ ಮಾದಕ ವಸ್ತುಗಳ ಬಳಕೆ ಹಾಗೂ ಮಾರಾಟಕ್ಕೆ ಕಡಿವಾಣ ಹಾಕಲು ಸಹಕರಿಸುವಂತೆ ವರಿಷ್ಠಾಧಿಕಾರಿಗಳು ಕೋರಿದ್ದಾರೆ.