ಮಡಿಕೇರಿ, ಅ. 16 : ಭಾಗಮಂಡಲ ತ್ರಿವೇಣಿ ಸಂಗಮದ ಬಳಿ ನೂತನವಾಗಿ ನಿರ್ಮಿಸಿರುವ ಮುಡಿ ಶೆಡ್ಡು, ಪಿಂಡ ಪ್ರದಾನ, ಶ್ರದ್ಧಾ ಮತ್ತು ಹೋಮ ಕಟ್ಟಡವನ್ನು ವಸತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ಉದ್ಘಾಟಿಸಿದರು.

ವೀರಾಜಪೇಟೆ ಶಾಸಕ ಕೆ.ಜಿ ಬೋಪಯ್ಯ, ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆÀ ಕವಿತಾ ಪ್ರಭಾಕರ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಜಿ.ಪಂ. ಸಿಇಒ ಭಂವರ್ ಸಿಂಗ್ ಮೀನಾ, ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ತಮ್ಮಯ್ಯ ಇತರರು ಇದ್ದರು.

ಸಚಿವರು ತಲಕಾವೇರಿಗೆ ಭೇಟಿ ನೀಡಿ ತಾಯಿ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದರು. ಶಾಸಕರು ಸಮಿತಿ ಅಧ್ಯಕ್ಷ, ತಕ್ಕ ಮುಖ್ಯಸ್ಥ ಕೋಡಿ ಮೋಟಯ್ಯ, ಅಧಿಕಾರಿಗಳು ಇದ್ದರು.