ಕುಶಾಲನಗರ, ಅ. 18: ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಗ್ರಾ.ಪಂ. ಚುನಾವಣಾ ಪೂರ್ವ ತಯಾರಿ ಕುರಿತು ವಲಯ ಮತ್ತು ಬೂತ್ ಅಧ್ಯಕ್ಷರುಗಳ ಸಭೆ ನಡೆಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಸ್. ಅನಂತಕುಮಾರ್ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್ ಮಾತನಾಡಿ, ಜಿಲ್ಲೆಯ ಪ್ರತಿಯೊಂದು ಗ್ರಾಪಂ ಮಟ್ಟದ ಸಭೆ ಕರೆದು ಚುನಾವಣೆ ಕಾರ್ಯಗಳ ಬಗ್ಗೆ ಚರ್ಚಿಸಿ ಕಾರ್ಯಕರ್ತರ ಸಲಹೆ ಗಳನ್ನು ಪಡೆದುಕೊಳ್ಳಲಾಗುವುದು ಎಂದರು.
ಜಿ.ಪಂ. ಸದಸ್ಯೆ ಕೆ.ಪಿ. ಚಂದ್ರಕಲಾ ಮಾತನಾಡಿ, ಪಕ್ಷದೊಳಗೆ ಕಾಲೆಳೆಯುವ ಪ್ರವೃತ್ತಿ ಸಲ್ಲದು. ಶ್ರದ್ಧೆಯಿಂದ ಪಕ್ಷಕ್ಕಾಗಿ ದುಡಿದಲ್ಲಿ ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಉತ್ತಮ ಸ್ಥಾನಮಾನ ಪಡೆದುಕೊಳ್ಳಬಹುದಾಗಿದೆ ಎಂದು ಕಿವಿಮಾತು ಹೇಳಿದರು.
ಕೆಪಿಸಿಸಿ ಸಂಯೋಜಕ ಪ್ರದೀಪ್ಕುಮಾರ್ ರೈ ಪಾಂಬಾರು ಮಾತನಾಡಿ, ಪಕ್ಷದ ಕಾರ್ಯಕರ್ತರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಪಕ್ಷ ಅಧಿಕಾರಗಳಿಸಲು ಸಾಧ್ಯ. ಎದುರಾಳಿ ಪಕ್ಷದವರು ನಮಗೆ ವಿರೋಧಿಗಳಾಗಬೇಕೇ ಹೊರತು ಆಂತರಿಕವಾಗಿ ವಿರೋಧಿಗಳಾಗ ಬಾರದು ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಸ್. ಅನಂತಕುಮಾರ್, ವ್ಯಕ್ತಿಗಿಂತ ಪಕ್ಷ ದೊಡ್ಡದು. ಪ್ರತಿ ಸಭೆಗಳಲ್ಲಿ ಕಾರ್ಯಕರ್ತರು, ವಲಯ, ಬೂತ್ ಅಧ್ಯಕ್ಷರುಗಳ ನೀಡಿದ ಸಲಹೆಗಳನ್ನು ಪರಿಗಣನೆಗೆ ತೆಗೆದುಕೊಂಡು ಅದರಂತೆ ಕಾರ್ಯನಿರ್ವಹಿಸ ಲಾಗುತ್ತಿದೆ. ಆಂತರಿಕ ಭಿನ್ನಾಭಿಪ್ರಾಯಗಳು ಇದ್ದಲ್ಲಿ ಸರಿಪಡಿಸಲಾಗುವುದು ಎಂದರು.
ಸಭೆಯಲ್ಲಿ ಪಾಲ್ಗೊಂಡಿದ್ದ ವಿವಿಧ ವಲಯ ಮತ್ತು ಬೂತ್ ಅಧ್ಯಕ್ಷರುಗಳು ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.
ಜಿ.ಪಂ. ಸದಸ್ಯರಾದ ಸುನಿತಾ, ಕುಮುದ ಧರ್ಮಪ್ಪ, ರಾಜ್ಯ ಕಾಂಗ್ರೆಸ್ ಕಾರ್ಮಿಕ ಘಟಕದ ಕಾರ್ಯದರ್ಶಿ ಅಜ್ಜಳ್ಳಿ ರವಿ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಲೋಕೇಶ್, ನಗರ ಘಟಕ ಅಧ್ಯಕ್ಷ ಶರೀಫ್ ಇಬ್ರಾಹಿಂ, ಪ್ರಮುಖರಾದ ಉಸ್ಮಾನ್, ಜರ್ನಾರ್ಧನ್, ಗೋವಿಂದರಾಜ್ ದಾಸ್ ಮತ್ತಿತರರು ಇದ್ದರು.