ಕೂಡಿಗೆ, ಅ. 18: ಹಾರಂಗಿ ಜಲಾಶಯದಿಂದ ಬೇಸಿಗೆ ಬೆಳೆಗೆ ನೀರನ್ನು ಒದಗಿಸುವಂತೆ ಈ ವ್ಯಾಪ್ತಿಯ ರೈತರು ಒತ್ತಾಯಿಸಿದ್ದಾರೆ. ಜಿಲ್ಲೆಯಲ್ಲಿ ಅಧಿಕ ಪ್ರಮಾಣದ ಮಳೆಯಿಂದಾಗಿ ಅಣೆಕಟ್ಟೆಗೆ ಹೆಚ್ಚು ನೀರು ಹರಿದು ಬರುತ್ತಿದೆ ಅಲ್ಲದೆ ಅಣೆಕಟ್ಟೆ ಭರ್ತಿಯಾಗಿ ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ನೀರಿನ ಮಟ್ಟ ವನ್ನು ಕಾಯ್ದುಕೊಂಡು ನದಿಗೆ ಹರಿಸುವ ಬದಲು ಬೇಸಿಗೆ ಬೆಳೆಯನ್ನು ಬೆಳೆಯಲು ಅನುಕೂಲವಾಗುವಂತೆ ಮಾಡಬೇಕೆಂದು ಹಾರಂಗಿ ಅಚ್ಚುಕಟ್ಟು ಪ್ರದೇಶದ ಐದು ಗ್ರಾಮ ಪಂಚಾಯತಿ ವ್ಯಾಪ್ತಿಯ 28 ಗ್ರಾಮಗಳ ರೈತರು ಗಮನ ಸೆಳೆದಿದ್ದಾರೆ.