ವೀರಾಜಪೇಟೆ, ಅ. 18: ವೀರಾಜಪೇಟೆ ಬಳಿಯ ಹೆಗ್ಗಳ ಗ್ರಾಮದ ರಾಮನಗರ ಎಂಬಲ್ಲಿ ಸಂಜೀವ (74) ಎಂಬವರು ಇಂದು ಮನೆಯ ಮುಂದಿನ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಇಲ್ಲಿನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ಸಂಜೀವ ಅನೇಕ ತಿಂಗಳುಗಳಿಂದ ಗಂಟಲು ಕ್ಯಾನ್ಸರ್ ರೋಗದಿಂದ ನರಳುತ್ತಿದ್ದು, ವೇದನೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸ್ ವಲಯದಲ್ಲಿ ಶಂಕಿಸಲಾಗಿದೆ.

ಮೃತರು ಚಾಲಕ ವೃತ್ತಿಯಲ್ಲಿದ್ದು, ಪತ್ನಿ, ಓರ್ವ ಪುತ್ರ ಹಾಗೂ ಈರ್ವರು ಪುತ್ರಿಯರನ್ನು ಅಗಲಿದ್ದಾರೆ. ಪೊಲೀಸರು ಮೃತದೇಹವನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.