ಸೋಮವಾರಪೇಟೆ, ಅ. 18: ಕಳೆದ ತಾ. 15ರಂದು ಬೆಂಗಳೂರಿನಲ್ಲಿ ನಡೆದ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸೆಂಟ್ರಲ್ ವಿಭಾಗದ ಡಿಸಿಪಿ ಅನುಚೇತ್ ನೇತೃತ್ವದ ಪೊಲೀಸರ ತಂಡ ಕೊಡಗಿನ ಈರ್ವರು ಸೇರಿ ದಂತೆ ಒಟ್ಟು ನಾಲ್ವರನ್ನು ಬಂಧಿಸಿದೆ.ಈ ನಡುವೆ ಸ್ಥಳ ಮಹಜರು ನಡೆಸುವ ಸಂದರ್ಭ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಆರೋಪದ ಮೇರೆ ಕೊಡಗಿನ ಓರ್ವ ಆರೋಪಿ ಸೇರಿದಂತೆ ಮಂಗಳೂರಿನ ಮತ್ತೋರ್ವನ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ.ಬೆಂಗಳೂರಿನ ಬ್ರಿಗೇಡ್ ರಸ್ತೆಯ ಡುಯೆಟ್ ಬಾರ್ ಮಾಲೀಕ ಮನೀಶ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ದಂತೆ ಕೊಡಗಿನ ಸೋಮವಾರ ಪೇಟೆಯ ಆಲೂರುಸಿದ್ದಾಪುರ ಸಮೀಪದ ಮಾಲಂಬಿ ನಿವಾಸಿ ಶಶಿಕಿರಣ್ ಅಲಿಯಾಸ್ ಮುನ್ನ, ಪಟ್ಟಣ ಸಮೀಪದ ಹಾನಗಲ್ಲು ಶೆಟ್ಟಳ್ಳಿ ನಿವಾಸಿ ನಿತ್ಯ ಅವರುಗಳ ಸಹಿತ ಮಂಗಳೂರಿನ ಗಣೇಶ್, ಬಂಟ್ವಾಳದ ಅಕ್ಷಯ್ ಅವರುಗಳನ್ನು ಬಂಧಿಸಲಾಗಿದೆ. ಆರೋಪಿಗಳು ಕೃತ್ಯ ನಡೆಸಿದ ನಂತರ ಬೆಂಗಳೂರು ಗಾಂಧಿನಗರದ ಲಾಡ್ಜ್‍ವೊಂದರಲ್ಲಿ ಅಡಗಿದ್ದ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಕಬ್ಬನ್ ಪಾರ್ಕ್ ಠಾಣೆಯ ಪೆÇಲೀಸರು ಕಾರ್ಯಾಚರಣೆ ನಡೆಸಿ ತಾ. 16ರ ಬೆಳಗ್ಗೆ 11:30ರ ಸುಮಾರಿಗೆ ಆರೋಪಿಗಳನ್ನು ಬಂಧಿಸಿದ್ದಾರೆ.ಮನೀಶ್ ಶೆಟ್ಟಿಯನ್ನು ಹತ್ಯೆಗೈಯಲು ಉಪಯೋಗಿಸಿದ್ದ ಮಾರಕಾಸ್ತ್ರಗಳನ್ನ ಜಪ್ತಿ ಮಾಡಲು ಹೊಸೂರು ರಸ್ತೆಯ ಬಾರ್ಲೆನ್ ಸ್ಮಶಾನ ಬಳಿ ಪೆÇಲೀಸರು ತಪಾಸಣೆ ಮಾಡುವಾಗ ಆರೋಪಿಗಳು ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದಾರೆ. ಆಗ ಪೆÇಲೀಸರು ಆತ್ಮರಕ್ಷಣೆಗಾಗಿ ಫೈರಿಂಗ್ ಮಾಡಿದ್ದಾರೆ. ಇದರಿಂದಾಗಿ ಆರೋಪಿ ಶಶಿಕಿರಣ್ ಹಾಗೂ ಅಕ್ಷಯ್ ಕಾಲಿಗೆ ಗುಂಡು ತಗುಲಿದೆ. ಗಾಯಗೊಂಡ ಅವರಿಬ್ಬರನ್ನು ಸೈಂಟ್ ಫಿಲೋಮಿನಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದ ತಾ 15ರಂದು ರಾತ್ರಿ ಬ್ರಿಗೇಡ್ ರಸ್ತೆಯಲ್ಲಿರುವ ಡುಯೆಟ್ ಬಾರ್‍ನ ಮಾಲೀಕ ಮನೀಶ್ ಶೆಟ್ಟಿ ಅವರನ್ನು ನಾಲ್ವರು ಆರೋಪಿಗಳು ಹತ್ಯೆಗೈದಿದ್ದರು. ಬ್ರಿಗೇಡ್ ರಸ್ತೆ ಬಳಿಯ ರೆಸ್ಟ್ ಹೌಸ್ ಪಾರ್ಕ್ ರಸ್ತೆಯಲ್ಲಿ ಮನೀಶ್ ಶೆಟ್ಟಿ ಮೇಲೆ ಸಿಂಗಲ್ ಬ್ಯಾರಲ್ ಲೋಡಿಂಗ್ ಗನ್‍ನಿಂದ ಆರೋಪಿಗಳು ಮೊದಲಿಗೆ ಫೈರಿಂಗ್ ಮಾಡಿದ್ದರು.

ಬಳಿಕ ವಾಪಸ್ ಬಂದು ಮಚ್ಚಿನಿಂದ ನಾಲ್ಕು ಬಾರಿ ಕೊಚ್ಚಿ ಹೊರಟು ಹೋಗಿದ್ದರು. ಕೊಲೆಗೆ ಬಳಸಿದ್ದ ಮಚ್ಚನ್ನು ಅವರು ಹೊಸೂರು ರಸ್ತೆಯ ಸ್ಮಶಾನದಲ್ಲಿ ಎಸೆದು ಹೋಗಿದ್ದರು. ಈ ಮಾರಕಾಸ್ತ್ರವನ್ನು ಪರಿಶೀಲಿಸುವಾಗ ಮತ್ತು ಸ್ಥಳದ ಮಹಜರು ಮಾಡುವಾಗ ಆರೋಪಿಗಳು ಪೆÇಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದರೆನ್ನಲಾಗಿದೆ.

ಗಾಯಗೊಂಡವರಲ್ಲಿ ಒಬ್ಬನಾದ ಆರೋಪಿ ಶಶಿಕಿರಣ್ ಅಲಿಯಾಸ್ ಮುನ್ನಾ ಈ ಕೊಲೆ ಪ್ರಕರಣದ ಮಾಸ್ಟರ್‍ಮೈಂಡ್ ಎನ್ನಲಾಗಿದೆ. ಈ ಹಿಂದೆ ಮಂಗಳೂರಿನ ಉಲ್ಲಾಳದಲ್ಲಿ ನಡೆದ ಡಬಲ್ ಮರ್ಡರ್, 2002ರಲ್ಲಿ ಕಾರ್ಕಳ ಹಲ್ಲೆ ಪ್ರಕರಣ, 1998ರಲ್ಲಿ ಕದ್ರಿ ಠಾಣಾ ವ್ಯಾಪ್ತಿಯಲ್ಲಿ 307ರ ಅಡಿಯಲ್ಲಿ ದಾಖಲಾದ ಪ್ರಕರಣ ಸೇರಿ ಹಲವು ಪ್ರಕರಣಗಳಲ್ಲಿ ಆತ ಆರೋಪಿಯಾಗಿದ್ದಾನೆ ಎನ್ನಲಾಗಿದೆ.

ಮನೀಶ್ ಶೆಟ್ಟಿಯ ಮೇಲೆ ಹಾನಗಲ್ಲುಶೆಟ್ಟಳ್ಳಿ ಗ್ರಾಮದ ನಿತ್ಯ ಬಂದೂಕಿನಿಂದ ಗುಂಡು ಹಾರಿಸಿದ್ದು, ಬಂಟ್ವಾಳದ ಅಕ್ಷಯ್ ನಾಲ್ಕು ಬಾರಿ ಮಚ್ಚಿನಿಂದ ಹಲ್ಲೆ ನಡೆಸಿರುವದಾಗಿ ಪ್ರಕರಣದ ತನಿಖೆ ನಡೆಸುತ್ತಿರುವ ಬೆಂಗಳೂರು ಸೆಂಟ್ರಲ್‍ನ ಡಿಸಿಪಿ, ಈ ಹಿಂದೆ ಕೊಡಗಿನಲ್ಲಿ ವರಿಷ್ಠಾಧಿಕಾರಿ ಗಳಾಗಿದ್ದ ಅನುಚೇತ್ ಅವರು ‘ಶಕ್ತಿ’ಗೆ ತಿಳಿಸಿದ್ದಾರೆ.

ಮನೀಶ್ ಹತ್ಯೆಯು ಸೇಡಿನ ಕ್ರಮ ಎಂದು ಹೇಳಲಾಗುತ್ತಿದೆ. ಕೊಲೆಯಾದ ಮನೀಶ್ ಶೆಟ್ಟಿ ಕೂಡ ಅನೇಕ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿದ್ದ. ಅಂಡರ್‍ವಲ್ರ್ಡ್ ಜೊತೆ ನಂಟನ್ನು ಹೊಂದಿದ್ದನೆನ್ನ ಲಾಗಿದೆ. ಹಳೇ ದ್ವೇಷದಲ್ಲಿ ಆತನ ಕೊಲೆಯಾಗಿದೆ ಎನ್ನಲಾಗಿದೆ.

ಈ ಪ್ರಕರಣದಲ್ಲಿ ಆರೋಪಿಗಳನ್ನ ಬಂಧಿಸಲು ಒಂಬತ್ತು ತಂಡಗಳನ್ನು ರಚಿಸಲಾಗಿತ್ತು. ಘಟನೆ ನಡೆದು ಎರಡು ದಿನ ಕಳೆಯುವಷ್ಟರಲ್ಲಿ ಪ್ರಕರಣದ ಎಲ್ಲಾ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.