*ಸಿದ್ದಾಪುರ, ಅ.18 : ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕಾವೇರಿ ತುಲಾ ಸಂಕ್ರಮಣದ ಪ್ರಯುಕ್ತ ಕಾವೇರಿ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಸಂಘದ ಆವರಣದಲ್ಲಿ ಪ್ರತಿಷ್ಠಾಪಿಸಲಾಗಿರುವ ಕಾವೇರಿ ಮೂರ್ತಿಗೆ ಪೂಜೆ ಸಲ್ಲಿಸಿ ಸಾರ್ವಜನಿಕರಿಗೆ ಕಾವೇರಿ ತೀರ್ಥ ವಿತರಿಸುವ ಸಂಪ್ರದಾಯವನ್ನು ಪ್ರತಿವರ್ಷ ನಡೆಸಿಕೊಂಡು ಬರಲಾಗುತ್ತಿತ್ತು. ಆದರೆ ಈ ಬಾರಿ ಕೋವಿಡ್ ಮಾರ್ಗಸೂಚಿ ಜಾರಿಯಲ್ಲಿರುವುದರಿಂದ ತೀರ್ಥ ವಿತರಿಸದೆ ಪೂಜೆಯನ್ನು ಮಾತ್ರ ಮಾಡಲಾಗಿದೆ ಎಂದು ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿಉತ್ತಪ್ಪ ತಿಳಿಸಿದರು.