ಮಡಿಕೇರಿ, ಅ. 18: ಜಿಲ್ಲೆಯಲ್ಲಿ ಹೊಸದಾಗಿ 90 ಕೊರೊನಾ ಪ್ರಕರಣಗಳು ವರದಿಯಾಗಿವೆ. ಇದುವರೆಗೆ 4408 ಪ್ರಕರಣಗಳು ವರದಿಯಾಗಿದ್ದು, 3694 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 61 ಮಂದಿ ಸಾವನ್ನಪ್ಪಿದ್ದು 653 ಪ್ರಕರಣಗಳು ಸಕ್ರಿಯವಾಗಿವೆ.

ಸೋಂಕಿತರ ಪೈಕಿ 108 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, 61 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 484 ಮಂದಿ ಹೋಮ್ ಐಸೋಲೇಷನ್‍ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ 485 ನಿಯಂತ್ರಿತ ವಲಯಗಳಿವೆ.