ಮಡಿಕೇರಿ, ಅ. 20: ಬಾಲ ನ್ಯಾಯ ಕಾಯ್ದೆ 2015 ಮತ್ತು ಮಾದರಿ ನಿಯಮಾವಳಿ 2016ರ ಅನ್ವಯ ಕೊಡಗು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ (ಸಿಡಬ್ಲ್ಯುಸಿ) 2020 ರಿಂದ 2023 ರವರೆಗೆ ಮೂರು ವರ್ಷಗಳ ಅವಧಿಗೆ ಒಬ್ಬರು ಅಧ್ಯಕ್ಷರು ಮತ್ತು ನಾಲ್ಕು ಮಂದಿ ಸದಸ್ಯರನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಅದೇ ರೀತಿ ಕೊಡಗು ಜಿಲ್ಲಾ ಬಾಲ ನ್ಯಾಯ ಮಂಡಳಿಗೆ (ಜೆಜೆಬಿ) 2020 ರಿಂದ 2023 ರವರೆಗೆ ಮೂರು ವರ್ಷಗಳ ಅವಧಿಗೆ ಇಬ್ಬರು ಸದಸ್ಯರನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಸಿಡಬ್ಲ್ಯುಸಿ ಅಥವಾ ಜೆಜೆಬಿ ಎರಡರಲ್ಲಿ ಯಾವುದಾದರೂ ಒಂದಕ್ಕೆ ಮಾತ್ರ ಅರ್ಜಿ ಸಲ್ಲಿಸಲು ಬಯಸಿದಲ್ಲಿ ಇವೆರಡರಲ್ಲಿ ಒಂದಕ್ಕೆ ಮಾತ್ರ ಭರ್ತಿ ಮಾಡಿದ ಅರ್ಜಿಯನ್ನು ದ್ವಿಪ್ರತಿಗಳಲ್ಲಿ ಸಲ್ಲಿಸಬೇಕು. ಒಂದು ವೇಳೆ ಅರ್ಜಿದಾರರು ಸಿಡಬ್ಲುಸಿ ಅಥವಾ ಜೆಜೆಬಿ ಎರಡಕ್ಕೂ ಅರ್ಜಿ ಸಲ್ಲಿಸಲು ಬಯಸಿದ್ದಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ದ್ವಿಪ್ರತಿಗಳಲ್ಲಿ ಎರಡಕ್ಕೂ ಪ್ರತ್ಯೇಕವಾಗಿ ಸಲ್ಲಿಸಬೇಕು.

ಅರ್ಜಿಯನ್ನು ರಿಜಿಸ್ಟರ್ಡ್ ಅಂಚೆ ಮೂಲಕ ಅಥವಾ ಖುದ್ದಾಗಿ ನವೆಂಬರ್ 15 ರ ಸಂಜೆ 5.30 ಗಂಟೆಯೊಳಗೆ ತಲುಪುವಂತೆ ನಿರ್ದೇಶಕರು, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಕೇರಾಪ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್. ಅಂಬೇಡ್ಕರ್ ರಸ್ತೆ, ಬೆಂಗಳೂರು-560001 ಈ ವಿಳಾಸಕ್ಕೆ ಕಳುಹಿಸಬೇಕು. ಇದಕ್ಕೆ ಸಂಬಂಧಪಟ್ಟ ಅರ್ಜಿ ನಮೂನೆಗಳು ಮತ್ತು ಸೂಚನೆಗಳು ವೆಬ್‍ಸೈಟ್ ತಿತಿತಿ.iಛಿಠಿs.ಞಚಿಡಿಟಿಚಿಣಚಿಞಚಿ.gov.iಟಿ ರಲ್ಲಿ ಲಭ್ಯವಿರುತ್ತದೆ.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಓಂಕಾರೇಶ್ವರ ದೇವಸ್ಥಾನದ ರಸ್ತೆ, ಕಲ್ಯಾಣ ಮಂಟಪದ ಬಳಿ, ಮಡಿಕೇರಿ ಇವರ ಕಚೇರಿಯನ್ನು ದೂ. 08272-228800 ಅಥವಾ ನಿರ್ದೇಶನಾಲಯದ ದೂ. 080-22879382, 22879383 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ತಿಳಿಸಿದ್ದಾರೆ.