ಕುಶಾಲನಗರ, ಅ. 19: ಸೋಮವಾರಪೇಟೆ ತಾಲೂಕು ಕಾನೂನು ಸೇವಾ ಸಮಿತಿ ಮತ್ತು ಕುಶಾಲನಗರ ವಕೀಲರ ಸಂಘದ ಆಶ್ರಯದಲ್ಲಿ ಕೊರೊನಾ ಜಾಗೃತಿ ಮತ್ತು ಮಾಸ್ಕ್ ವಿತರಣೆ ಕಾರ್ಯಕ್ರಮ ನಡೆಯಿತು.

ಕುಶಾಲನಗರದ ಜೆಎಂಎಫ್‍ಸಿ ನ್ಯಾಯಾಲಯದ ಆವರಣದಲ್ಲಿ ಕಾರ್ಯಕ್ರಮಕ್ಕೆ ನ್ಯಾಯಧೀಶ ಸಂದೀಪ್ ರೆಡ್ಡಿ ಚಾಲನೆ ನೀಡಿದರು. ಕೊರೊನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕುರಿತು ವಕೀಲರು, ನ್ಯಾಯಾಲಯ ಸಿಬ್ಬಂದಿಗಳಿಗೆ ಅವರು ಪ್ರಮಾಣ ವಚನ ಬೋಧಿಸಿದರು.

ವಕೀಲರ ಸಂಘದ ಅಧ್ಯಕ್ಷ ಆರ್.ಕೆ. ನಾಗೇಂದ್ರಬಾಬು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲ್ಲಿ ಸಾರ್ವಜನಿಕರಿಗೆ ಮಾಸ್ಕ್‍ಗಳನ್ನು ವಿತರಣೆ ಮಾಡಲಾಯಿತು. ಈ ಸಂದರ್ಭ ವಕೀಲರ ಸಂಘದ ಕಾರ್ಯದರ್ಶಿ ಕೆ.ಬಿ. ಮೋಹನ್, ಸಹ ಕಾರ್ಯದರ್ಶಿ ಎಸ್.ಬಿ. ನಂದಕುಮಾರ್, ಶಿರಸ್ತೇದಾರ್ ನಾಗರತ್ನ ಸೇರಿದಂತೆ ವಕೀಲರ ಸಂಘದ ಪದಾಧಿಕಾರಿಗಳು, ನ್ಯಾಯಾಲಯ ಸಿಬ್ಬಂದಿ ವರ್ಗದವರು ಇದ್ದರು.