ಮಡಿಕೇರಿ, ಅ. 19: ಪ್ರಸಕ್ತ ವರ್ಷ ಬಿತ್ತನೆ ಕಾಫಿ ಬೀಜಕ್ಕೆ (Seeಜ ಅoಜಿಜಿee) ಆಸಕ್ತ ಕಾಫಿ ಬೆಳೆಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬಿತ್ತನೆ ಬೀಜಕ್ಕೆ ಅರ್ಜಿ ಸಲ್ಲಿಸಲಿಚ್ಛಿಸುವ ಆಸಕ್ತ ಕಾಫಿ ಬೆಳೆಗಾರರು ಮಂಡಳಿಯ ಕಚೇರಿಯಲ್ಲಿ ದೊರೆಯುವ ಅರ್ಜಿಯನ್ನು ಭರ್ತಿ ಮಾಡಿ ಪ್ರತಿ ಕೆ.ಜಿ. ಬಿತ್ತನೆ ಬೀಜಕ್ಕೆ ರೂ. 500 ನ್ನು ಮುಂಗಡವಾಗಿ ಪಾವತಿಸಿ ತಮ್ಮ ಹೆಸರನ್ನು ನೋಂದಾಯಿಸಬಹುದಾಗಿದೆ.
ಬಿತ್ತನೆ ಬೀಜಕ್ಕೆ ಅರ್ಜಿ ಸಲ್ಲಿಸಲಿಚ್ಛಿಸುವವರು ರೂ. 500 ರಿಂದ ರೂ. 2000 ದವರೆಗೆ ನಗದು ಅಥವಾ ಡಿಡಿ ಮುಖಾಂತರ ನೀಡಬಹುದು, ರೂ. 2000 ಕ್ಕಿಂತ ಹೆಚ್ಚಿನ ಹಣವನ್ನು ಡಿಡಿ ಮುಖಾಂತರವೇ ನೀಡಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13 ನವೆಂಬರ್ ಆಗಿದೆ. ಹೆಚ್ಚಿನ ಮಾಹಿತಿಗೆ ಹತ್ತಿರದ ಕಾಫಿ ಮಂಡಳಿ ಕಚೇರಿಗಳನ್ನು ಸಂಪರ್ಕಿಸುವಂತೆ ವೀರಾಜಪೇಟೆ ಕಾಫಿ ಮಂಡಳಿ ಉಪ ನಿರ್ದೇಶಕರು ತಿಳಿಸಿದ್ದಾರೆ.