ಕುಶಾಲನಗರ, ಅ. 19: ‘ನಮಾಮಿ ಕಾವೇರಿ’ ಸ್ಮರಣ ಸಂಚಿಕೆ ತಾ. 21 ರಂದು ಕುಶಾಲನಗರದಲ್ಲಿ ಲೋಕಾರ್ಪಣೆಗೊಳ್ಳಲಿದೆ. ಕುಶಾಲನಗರ ಕಾವೇರಿ ಆರತಿ ಕ್ಷೇತ್ರದಲ್ಲಿ ನಡೆಯಲಿರುವ ಸರಳ ಕಾರ್ಯಕ್ರಮವನ್ನು ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಉದ್ಘಾಟಿಸಲಿದ್ದು, ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಪುಸ್ತಕ ಲೋಕಾರ್ಪಣೆ ಮಾಡಲಿದ್ದಾರೆ.

ಮುಖ್ಯ ಭಾಷಣಕಾರರಾಗಿ ಶಕ್ತಿ ಪತ್ರಿಕೆಯ ಪ್ರಧಾನ ಸಂಪಾದಕ ಜಿ. ರಾಜೇಂದ್ರ ಅವರು ಪಾಲ್ಗೊಳ್ಳಲಿದ್ದು, ಶ್ರೀರಂಗಪಟ್ಟಣದ ಶಾಶ್ವತಿ ಧಾರ್ಮಿಕ ಕ್ರಿಯಾ ಕೇಂದ್ರದ ಅಧ್ಯಕ್ಷ ವೇ.ಬ್ರ. ಡಾ. ಭಾನುಪ್ರಕಾಶ್ ಶರ್ಮ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕುಡಾ ಅಧ್ಯಕ್ಷ ಎಂ.ಎಂ. ಚರಣ್, ಕುಶಾಲನಗರ ಪ.ಪಂ. ನೂತನ ಅಧ್ಯಕ್ಷರು ಸೇರಿದಂತೆ ಗಣ್ಯರು ಉಪಸ್ಥಿತರಿರಲಿದ್ದಾರೆ. ಜೀವನದಿ ಕಾವೇರಿಗೆ 100 ಆರತಿ ಬೆಳಗಿದ ಹಿನ್ನೆಲೆ ರೂಪುಗೊಂಡಿರುವ ‘ನಮಾಮಿ ಕಾವೇರಿ’ ಸ್ಮರಣ ಸಂಚಿಕೆಯ ಮುಖಪುಟವನ್ನು ಕಳೆದ ನವೆಂಬರ್ ತಿಂಗಳಲ್ಲಿ ಕಾವೇರಿ ನದಿ ಹಬ್ಬ ಸಮಾರಂಭದಲ್ಲಿ ಶ್ರೀ ಕ್ಷೇತ್ರ ಸುತ್ತೂರು ಮಠಾಧೀಶ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿಗಳು ಅನಾವರಣಗೊಳಿಸಿದ್ದರು. - ಚಂದ್ರಮೋಹನ್