ಕೂಡಿಗೆ, ಅ. 20: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ದೇವಾಲಯದ ಆವರಣದಲ್ಲಿ ನವರಾತ್ರಿಯ ಪೂಜೆ ಅಂಗವಾಗಿ ಗ್ರಾಮದ ಮಹಿಳೆಯರು ಲಲಿತಾ ಸಹಸ್ರನಾಮ ಪಾರಾಯಣದೊಂದಿಗೆ ಕುಂಕುಮಾರ್ಚನೆ ಪೂಜೆ ನೆರವೇರಿಸಿದರು.
ತಾ. 23 ರಂದು ದೇವಿಯ ಸನ್ನಿಧಿಯಲ್ಲಿ ಗಣಪತಿ ಹೋಮ, ಶ್ರೀ ಮೃತ್ಯುಂಜಯ ಹೋಮ ನಂತರ ಚಂಡಿಕಾ ಹೋಮ ನಡೆಯಲಿದೆ. ಮಧ್ಯಾಹ್ನ ಮತ್ತು ರಾತ್ರಿ ಅನ್ನಸಂತರ್ಪಣೆ ನೆರವೇರಲಿದೆ ಎಂದು ದೇವಾಲಯ ಸಮಿತಿಯ ಅಧ್ಯಕ್ಷ ಟಿ.ಎಂ. ಚಾಮಿ ತಿಳಿಸಿದ್ದಾರೆ.