ಸೋಮವಾರಪೇಟೆ, ಅ. 20: ಹರಪಳ್ಳಿ ರವೀಂದ್ರ ಅಭಿಮಾನಿಗಳ ಸಂಘದ ವತಿಯಿಂದ ಪಟ್ಟಣದಲ್ಲಿ ತಲಕಾವೇರಿ ತೀರ್ಥವನ್ನು ಸಾರ್ವಜನಿಕರಿಗೆ ವಿತರಿಸಲಾಯಿತು.
ಜೇಸಿ ವೇದಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಫಿ ಬೆಳೆಗಾರ ನಗರಳ್ಳಿ ಬಸಪ್ಪ ತೀರ್ಥ ವಿತರಿಸಿದರು. ಕರವೇ ತಾಲೂಕು ಅಧ್ಯಕ್ಷ ಕೆ.ಎನ್. ದೀಪಕ್, ಎಐಟಿಯುಸಿ ಜಿಲ್ಲಾಧ್ಯಕ್ಷ ಹೆಚ್.ಎಂ. ಸೋಮಪ್ಪ, ಅಭಿಮಾನಿಗಳ ಸಂಘದ ಅಧ್ಯಕ್ಷ ಹೆಚ್.ಎ. ನಾಗರಾಜ್, ಉಪಾಧ್ಯಕ್ಷ ಆನಂದ್, ಕಾರ್ಯದರ್ಶಿ ರಾಜಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.