ಕುಶಾಲನಗರ, ಅ. 20: ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ನಿರ್ದೇಶನದಂತೆ ಪ್ರಧಾನಮಂತ್ರಿ ಜನೌಷಧಿ ಕೇಂದ್ರದ ವತಿಯಿಂದ ಕೋವಿಡ್-19 ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಮಾಸ್ಕ್ ಬಳಕೆ, ಪರಸ್ಪರ ಅಂತರ ಕಾಪಾಡುವುದು, ಕೈಗಳನ್ನು ಸ್ವಚ್ಛಗೊಳಿಸುವಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದರೊಂದಿಗೆ ಉಚಿತವಾಗಿ ಮಾಸ್ಕ್ ವಿತರಣೆ ಮಾಡಲಾಯಿತು.

ಈ ಸಂದರ್ಭ ಕುಶಾಲನಗರ ಜನೌಷಧಿ ಕೇಂದ್ರದ ಮಾಲೀಕ ಕೆ.ಟಿ. ಹರೀಶ್, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಮಧುಸೂದನ್ ಸೇರಿದಂತೆ ವೈದ್ಯರು ಹಾಗೂ ಸಿಬ್ಬಂದಿಗಳು ಇದ್ದರು.