ಸಿದ್ದಾಪುರ, ಅ. 20: ನೆಲ್ಲಿಹುದಿಕೇರಿ ಗ್ರಾ.ಪಂ ವತಿಯಿಂದ ಪಂಚಾಯಿತಿ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಕುರಿತ ಜಾಗೃತಿ ಕಾರ್ಯಕ್ರಮಕ್ಕೆ ಮುಂದಾಗಿದೆ. ನೆಲ್ಲಿಹುದಿಕೇರಿ ಗ್ರಾ.ಪಂ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ಹೆಚ್ಚಾಗಿದ್ದು, ಪಂಚಾಯಿತಿ ಜಾಗದ ಕೊರತೆ ಇರುವ ಹಿನ್ನೆಲೆಯಲ್ಲಿ ಗ್ರಾಮದ ಮನೆಗಳಲ್ಲಿನ ತ್ಯಾಜ್ಯಗಳನ್ನು ಮನೆಗಳಲ್ಲಿ ವಿಂಗಡಿಸಿ ಘನ ತ್ಯಾಜ್ಯ ನಿರ್ವಹಣೆ ಮಾಡುವ ಕುರಿತು ಮನೆ ಮನೆಗೆ ತೆರಳಿ ಅರಿವು ಮೂಡಿಸುವ ಕಾರ್ಯದಲ್ಲಿ ತೊಡಗಿದೆ.

ಈ ಹಿನ್ನೆಲೆಯಲ್ಲಿ ಗ್ರಾ.ಪಂ ಪಿ.ಡಿ.ಓ ಅನಿಲ್ ಕುಮಾರ್ ನೇತೃತ್ವದಲ್ಲಿ ದಿನಕ್ಕೆ 20 ಮನೆಗಳಿಗೆ ಭೇಟಿ ನೀಡಿ ತ್ಯಾಜ್ಯ ವಿಂಗಡಣೆ ನಿರ್ವಹಣೆಯ ಕುರಿತು ಅರಿವು ಮೂಡಿಸುವುದರೊಂದಿಗೆ ಎಲ್ಲೆಂದರಲ್ಲಿ ಕಸ ಎಸೆಯದಂತೆ ಮನವಿ ಮಾಡುವ ಕಾರ್ಯ ನಡೆಯುತ್ತಿದೆ.

ಸಿಸಿ ಕ್ಯಾಮೆರಾ ಕಣ್ಗಾವಲು: ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಎಸೆಯುವ ಸಾರ್ವಜನಿಕರನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ನೆಲ್ಲಿಹುದಿಕೇರಿ ಪಟ್ಟಣದಿಂದ ಮಡಿಕೇರಿಗೆ ತೆರಳುವ ರಸ್ತೆಯ ಮಾರ್ಗದಲ್ಲಿ ಪಂಚಾಯಿತಿ ವತಿಯಿಂದ ಸಿಸಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಇತ್ತೀಚೆಗೆ ವಾಲ್ನೂರು ಗ್ರಾ.ಪಂ ವ್ಯಾಪ್ತಿಗೆ ಒಳಪಡುವ ಒಂಟಿಯಂಗಡಿ ಸಮೀಪದ ರಸ್ತೆ ಬದಿಯಲ್ಲಿ ಯಾರೋ ಚೀಲದಲ್ಲಿ ತುಂಬಿಸಿ ಎಸೆದಿದ್ದ ತ್ಯಾಜ್ಯಗಳನ್ನು ಕಾಡಾನೆಗಳು ದಾಳಿ ನಡೆಸಿ ಎಳೆದು ಹಾಕಿದ ದೃಶ್ಯವು ಸಿಸಿ ಕ್ಯಾಮೆರಾ ದಲ್ಲಿ ಸೆರೆಯಾಗಿತ್ತು. ನೆಲ್ಲಿಹುದಿಕೇರಿಯ ಗ್ರಾ.ಪಂ ಕಸ ನಿವಾರಣೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ ಗ್ರಾಮಸ್ಥರ ಸಹಕಾರ ಅಗತ್ಯವಿದೆ. ಗ್ರಾಮಸ್ಥರು ತಮ್ಮ ಮನೆಗಳ ತ್ಯಾಜ್ಯಗಳನ್ನು ವಿಂಗಡಿಸಿ ನಿರ್ವಹಣೆ ಮಾಡಿದರೆ ಕಸದ ಸಮಸ್ಯೆ ಇತ್ಯರ್ಥವಾಗುತ್ತದೆ. ಪಂಚಾಯಿತಿ ವಾಹನದ ಮೂಲಕ ಕೊಂಡೊಯ್ದು ವಿಲೇವಾರಿ ಮಾಡಲು ಅನುಕೂಲವಾಗುತ್ತದೆ ಗ್ರಾಮಸ್ಥರು ಪಂಚಾಯಿತಿಗೆ ಸಹಕಾರ ನೀಡಬೇಕು ಎಂದು ಗ್ರಾಮ ಅಭಿವೃದ್ಧಿ ಅಧಿಕಾರಿ ಅನಿಲ್‍ಕುಮಾರ್ ಗ್ರಾಮಸ್ಥರಲ್ಲಿ ಮನವಿ ಮಾಡಿದ್ದಾರೆ. ಚೀಲದಲ್ಲಿ ತುಂಬಿಸಿ ಎಸೆದಿದ್ದ ತ್ಯಾಜ್ಯಗಳನ್ನು ಕಾಡಾನೆಗಳು ದಾಳಿ ನಡೆಸಿ ಎಳೆದು ಹಾಕಿದ ದೃಶ್ಯವು ಸಿಸಿ ಕ್ಯಾಮೆರಾ ದಲ್ಲಿ ಸೆರೆಯಾಗಿತ್ತು. ನೆಲ್ಲಿಹುದಿಕೇರಿಯ ಗ್ರಾ.ಪಂ ಕಸ ನಿವಾರಣೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ ಗ್ರಾಮಸ್ಥರ ಸಹಕಾರ ಅಗತ್ಯವಿದೆ. ಗ್ರಾಮಸ್ಥರು ತಮ್ಮ ಮನೆಗಳ ತ್ಯಾಜ್ಯಗಳನ್ನು ವಿಂಗಡಿಸಿ ನಿರ್ವಹಣೆ ಮಾಡಿದರೆ ಕಸದ ಸಮಸ್ಯೆ ಇತ್ಯರ್ಥವಾಗುತ್ತದೆ. ಪಂಚಾಯಿತಿ ವಾಹನದ ಮೂಲಕ ಕೊಂಡೊಯ್ದು ವಿಲೇವಾರಿ ಮಾಡಲು ಅನುಕೂಲವಾಗುತ್ತದೆ ಗ್ರಾಮಸ್ಥರು ಪಂಚಾಯಿತಿಗೆ ಸಹಕಾರ ನೀಡಬೇಕು ಎಂದು ಗ್ರಾಮ ಅಭಿವೃದ್ಧಿ ಅಧಿಕಾರಿ ಅನಿಲ್‍ಕುಮಾರ್ ಗ್ರಾಮಸ್ಥರಲ್ಲಿ ಮನವಿ ಮಾಡಿದ್ದಾರೆ.