ಕೂಡಿಗೆ, ಅ. 20: ಹಾರಂಗಿಯಲ್ಲಿ ವಷರ್ಂಪ್ರತಿಯಂತೆ ಈ ಬಾರಿಯು ತಲಕಾವೇರಿಯಿಂದ ತೀರ್ಥವನ್ನು ತಂದು ಹಾರಂಗಿಯ ಅಣೆಕಟ್ಟೆಯ ಮುಂಭಾಗದಲ್ಲಿರುವ ಕಾವೇರಿ ಮಾತೆಯ ವಿಗ್ರಹಕ್ಕೆ ಪೂಜಾ ಕೈಂಕರ್ಯಗಳನ್ನು ನಡೆಸಿ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರಿಗೆ ತೀರ್ಥವನ್ನು ವಿತರಣೆ ಮಾಡಲಾಯಿತು.

ಹಾರಂಗಿಯ ನೀರಾವರಿ ಇಲಾಖೆಯವರು ಮತ್ತು ಸಮೀಪದ ವಿದ್ಯುತ್ ಘಟಕದವರು ಸೇರಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ನೆರೆದಿದ್ದ ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿನಿಯೋಗ ಮಾಡಿದರು. ಈ ಪೂಜಾ ಕಾರ್ಯಕ್ರಮದಲ್ಲಿ ಹಾರಂಗಿ, ಅತ್ತೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು. ಈ ಸಂದರ್ಭ ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ರಾಜೇಗೌಡ, ಸಹಾಯಕ ಕಾರ್ಯಪಾಲಕ ಅಭಿಯಂತರ ಮಹೇಂದ್ರ ಕುಮಾರ, ಇಂಜಿನಿಯರ್ ನಾಗರಾಜ್, ಕಿರಣ್ ಸೇರಿದಂತೆ ಸಿಬ್ಬಂದಿ ವರ್ಗದವರು ಹಾಜರಿದ್ದರು.