ಪೊಲೀಸರ ತ್ಯಾಗವನ್ನು ಕೊಂಡಾಡಿದ ¥್ರÀಧಾನಿ
ನವದೆಹಲಿ, ಅ. 21: ಪೆÇಲೀಸ್ ಸಂಸ್ಮರಣಾ ದಿನವನ್ನು ಆಚರಿಸಲಾಗಿದ್ದು, ಈ ಹಿನ್ನೆಲೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪೆÇಲೀಸರ ಸಾಹಸ ಹಾಗೂ ತ್ಯಾಗವನ್ನು ಕೊಂಡಾಡಿದ್ದಾರೆ. ಕಾನೂನು ಸುವ್ಯವಸ್ಥೆಯನ್ನು ಕಾಪಾಡುವುದರಿಂದ ಹಿಡಿದು ಭಯಾನಕ ಅಪರಾಧ ಪ್ರಕರಣಗಳನ್ನು ಬಗೆಹರಿಸುವವರೆಗೆ, ವಿಪತ್ತು ನಿರ್ವಹಣೆಗೆ ಸಹಾಯ ಮಾಡುವುದರಿಂದ ಹಿಡಿದು ಕೋವಿಡ್-19 ವಿರುದ್ಧ ಹೋರಾಡುವವರೆಗೆ, ಯಾವುದೇ ಹಿಂಜರಿಕೆಯಿಲ್ಲದೆ ನಮ್ಮ ಪೆÇಲೀಸ್ ಸಿಬ್ಬಂದಿಗಳು ಅತ್ಯುತ್ತಮ ಕಾರ್ಯನಿರ್ವಹಿಸುತ್ತಿದ್ದಾರೆ. ಜನ ಸೇವೆಯತ್ತ ಅವರ ಸಮರ್ಪಣೆ ಮತ್ತು ಸರ್ವ ಸನ್ನದ್ಧತೆಯ ಬಗ್ಗೆ ನಮಗೆ ಹೆಮ್ಮೆ ಇದೆ ಎಂದು ಹೇಳಿದ್ದಾರೆ. ಪೆÇಲೀಸ್ ಸಂಸ್ಮರಣಾ ದಿನವು ನಮ್ಮ ಪೆÇಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಭಾರತದಾದ್ಯಂತ ಕೃತಜ್ಞತೆ ಸಲ್ಲಿಸುವ ಅವಕಾಶವಾಗಿದೆ. ಕರ್ತವ್ಯದ ಸಾಲಿನಲ್ಲಿ ಹುತಾತ್ಮರಾದ ಎಲ್ಲಾ ಪೆÇಲೀಸ್ ಸಿಬ್ಬಂದಿಗೆ ನಾವು ಗೌರವ ಸಲ್ಲಿಸುತ್ತೇವೆ. ಅವರ ತ್ಯಾಗ ಮತ್ತು ಸೇವೆ ಯಾವಾಗಲೂ ನೆನಪಿನಲ್ಲಿ ಉಳಿಯುತ್ತದೆ ಎಂದು ತಿಳಿಸಿದ್ದಾರೆ.
ವೈಮಾನಿಕ ಮಳೆ ಸಮೀಕ್ಷೆ ನಡೆಸಿದ ಸಿಎಂ
ಕಲಬುರ್ಗಿ, ಅ. 21: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬುಧವಾರ ಕಲಬುರ್ಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದರು. ಅತಿವೃಷ್ಟಿಯಿಂದ ಬೆಳೆ ನಾಶವಾಗಿದ್ದು, ಹಲವು ಮನೆಗಳು ಬಿದ್ದಿವೆ. ಇದರ ಬಗ್ಗೆ ಮಾಹಿತಿ ಪಡೆಯಲು ವೈಮಾನಿಕ ಸಮೀಕ್ಷೆ ನಡೆಸಲು ತೆರಳುತ್ತಿದ್ದೇವೆ. ಈಗಾಗಲೇ ಪರಿಹಾರ ಹಣ ಬಿಡುಗಡೆ ಮಾಡಲಾಗಿದೆ. ಇನ್ನು ಹೆಚ್ಚಿನ ಹಣವನ್ನು ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಲಾಗುವುದು ತಕ್ಷಣ ಜನರ ಸಮಸ್ಯೆಗೆ ಸ್ಪಂದಿಸಲು ಸೂಚಿಸಲಾಗಿದೆ ಎಂದು ಅಧಿಕಾರಿಗಳ ಸಭೆಯ ಬಳಿಕ ಸಿಎಂ ತಿಳಿಸಿದ್ದಾರೆ. ಸಮೀಕ್ಷೆಯ ಬಳಿಕ ಕೇಂದ್ರಕ್ಕೆ ವರದಿ ಸಲ್ಲಿಸಲಾಗುವುದು. ಬಳಿಕ ಕೇಂದ್ರ ತಂಡ ಬರಬಹುದು ಎಂದು ಪ್ರಶ್ನೆಯೊಂದಕ್ಕೆ ಸಿಎಂ ಉತ್ತರಿಸಿದರು. ಕಲಬುರ್ಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳ ನೆರೆಪೀಡಿತ ಪ್ರದೇಶದ ವೀಕ್ಷಣೆ ಮಾಡಿದ ನಂತರ ಯಡಿಯೂರಪ್ಪ ಕಲಬುರ್ಗಿಗೆ ಆಗಮಿಸಿದರು. ವಿಮಾನ ನಿಲ್ದಾಣದಲ್ಲಿಯೇ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಈ ವೇಳೆ ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾನಿಯ ಮಾಹಿತಿ ನೀಡಿದರು. ಜಂಟಿ ಸರ್ವೆ ನಂತರ ಹಾನಿಯ ನಿಖರ ಮಾಹಿತಿ ಸಿಗಲಿದ್ದು, ಎನ್.ಡಿ.ಆರ್.ಎಫ್. ನಿಯಮದ ಅಡಿ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದರು.
ಕೇಂದ್ರ ನೌಕರರಿಗೆ ಬೋನಸ್ ಘೋಷಣೆ
ನವದೆಹಲಿ, ಅ. 21: ಕೇಂದ್ರ ಸರ್ಕಾರ ಬುಧವಾರ ತನ್ನ ನೌಕರರಿಗೆ 2019-2020ನೇ ಸಾಲಿನ ಬೋನಸ್ ಘೋಷಿಸಿದ್ದು, 30 ಲಕ್ಷ ಉದ್ಯೋಗಿಗಳು ಇದರ ಲಾಭ ಪಡೆಯಲಿದ್ದಾರೆ. ಕೇಂದ್ರ ಸರ್ಕಾರದ ಸಿ ಮತ್ತು ಡಿ ದರ್ಜೆ ನೌಕರರಿಗೆ ಬೋನಸ್ ನೀಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು ತಿಳಿಸಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಾವೇಡಕರ್ ಅವರು, ಬೋನಸ್ನ ಒಟ್ಟು 3,737 ಕೋಟಿ ರೂಪಾಯಿ ಆಗಿದ್ದು, ಕನಿಷ್ಟ 30 ಲಕ್ಷ ನಾನ್ ಗೆಜೆಟೆಡ್ ಉದ್ಯೋಗಿಗಳಿಗೆ ಇದರಿಂದ ಅನುಕೂಲವಾಗಲಿದೆ. ವಿಜಯ ದಶಮಿಗೆ ಮುಂಚೆ ಒಂದೇ ಸಲಕ್ಕೆ ಈ ಬೋನಸ್ ಮೊತ್ತವನ್ನು ವಿತರಣೆ ಮಾಡಲಾಗುತ್ತದೆ ಎಂದರು. ಕೇಂದ್ರ ಸರ್ಕಾರದ ಈ ಬೋನಸ್ ನೀಡುವ ಕ್ರಮದಿಂದ ದೇಶದ ಆರ್ಥಿಕತೆಗೆ ಪುಷ್ಟಿ ಸಿಗುತ್ತದೆಂದು ಪ್ರಕಾಶ್ ಜಾವಡೇಕರ್ ನಿರೀಕ್ಷಿಸಿದ್ದಾರೆ. ಮುಂಬರುವ ಹಬ್ಬದ ಸೀಸನ್ನಲ್ಲಿ ಜನರಿಗೆ ಕೊಳ್ಳುವ ಶಕ್ತಿ ಹೆಚ್ಚಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಜಮ್ಮುವಿನಲ್ಲಿ ಪಂಚಾಯತ್ ರಾಜ್ ಕಾಯ್ದೆ
ನವದೆಹಲಿ, ಅ. 21: ಜಮ್ಮು ಮತ್ತು ಕಾಶ್ಮೀರ ಪಂಚಾಯತ್ ರಾಜ್ ಕಾಯ್ದೆ 1989 ಅನ್ನು ಜಾರಿಗೊಳಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ ಎಂದು ಸರ್ಕಾರದ ವಕ್ತಾರರು ತಿಳಿಸಿದ್ದಾರೆ. ಇಂದು ಪ್ರಧಾನಿ ನರೇಂದ್ರಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಸರ್ಕಾರದ ಈ ಕ್ರಮವು ದೇಶದ ಇತರ ಭಾಗಗಳಂತೆ ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ಹಂತದ ತಳಮಟ್ಟದ ಪ್ರಜಾಪ್ರಭುತ್ವವನ್ನು ಸ್ಥಾಪಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು. 370 ವಿಧಿ ರದ್ದುಗೊಳಿಸುವ ಮುನ್ನ ಕಣಿವೆ ರಾಜ್ಯದಲ್ಲಿ ಮೂರು ಹಂತದ ಪಂಚಾಯತ್ ರಾಜ್ ವ್ಯವಸ್ಥೆ ಇರಲಿಲ್ಲ. ಈಗ ಅಲ್ಲಿ ಪಂಚಾಯತ್ ರಾಜ್ ಕಾಯ್ದೆ ಜಾರಿಗೆ ಬರಲಿದೆ ಎಂದು ಜಾವಡೇಕರ್ ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಸಂಸತ್ತಿನಲ್ಲಿ ಗೃಹ ಸಚಿವ ಅಮಿತ್ ಶಾ ಅವರು ನೀಡಿದ ಭರವಸೆಯಂತೆ ಈಗ ಪಂಚಾಯತ್ ರಾಜ್ ಕಾಯ್ದೆ ಜಾರಿಗೆ ಬರುತ್ತಿದೆ ಎಂದು ಅವರು ಹೇಳಿದರು.
ಚೀನಾ ಸೈನಿಕನನ್ನು ಮರಳಿಸಿದ ಭಾರತ
ಲಡಾಖ್, ಅ. 21: ಪೂರ್ವ ಲಡಾಕ್ನಲ್ಲಿ ಉಭಯ ದೇಶಗಳ ನಡುವಿನ ಗಡಿ ಉದ್ವಿಗ್ನತೆ ಮತ್ತು ಸೈನಿಕರ ಭಿನ್ನಾಭಿಪ್ರಾಯದ ನಡುವೆಯೂ ಭಾರತೀಯ ಸೈನಿಕರು ಮಾನವೀಯತೆಯನ್ನು ಮೆರೆಯುತ್ತಿದ್ದಾರೆ. ಇತ್ತೀಚಿಗಷ್ಟೇ ದಾರಿತಪ್ಪಿ ಭಾರತದ ಗಡಿ ಪ್ರವೇಶಿಸಿದ್ದ ಚೀನಾದ ಪೀಪಲ್ ಲಿಬರೇಶನ್ ಆರ್ಮಿ (ಪಿಎಲ್ಎ) ಸೈನಿಕನಿಗೆ ಆಹಾರ, ತೀವ್ರ ಚಳಿಯಿಂದ ರಕ್ಷಣೆ ನೀಡುವ ಬಟ್ಟೆ, ಔಷಧಿ ನೀಡಿ ಉಪಚರಿಸಿದ್ದ ಸೈನಿಕರು ಇದೀಗ ಆತನನ್ನು ವಾಪಸ್ ಕಳುಹಿಸಿದ್ದಾರೆ. ಸೇನಾ ವಶದಲ್ಲಿದ್ದ ಚೀನಿ ಸೈನಿಕನನ್ನು ಕೊಪೆರ್Çರಲ್ ವಾಂಗ್ ಯಾ ಲಾಂಗ್ ಎಂದು ಗುರುತಿಸಲಾಗಿದೆ. ಈತನನ್ನು ಚುಮರ್-ಡೆಮ್ಚೋಕ್ ಪ್ರದೇಶದಿಂದ ಭಾರತೀಯ ಸೇನೆ ವಶಕ್ಕೆ ಪಡೆದಿತ್ತು. ಈತನನ್ನು ಚೀನಾ ಪೀಪಲ್ಸ್ ಲಿಬರೇಷನ್ ಆರ್ಮಿಗೆ ಹಸ್ತಾಂತರ ಮಾಡುವುದಕ್ಕೂ ಮುಂಚಿತವಾಗಿ ಭಾರತೀಯ ಸೇನೆಯ ಚೀನಿ ತಜ್ಞರು ಈತನನ್ನು ವಿಚಾರಣೆಗೆ ಒಳಪಡಿಸಿದ್ದರು.
ತುಳು ಚಿತ್ರ ನಟ ಸುರೇಂದ್ರ ಹತ್ಯೆ
ಮಂಗಳೂರು, ಅ. 21: ಸುವರ್ಣದೀರ್ಘ ಸಂಧಿ ಸೇರಿದಂತೆ ಕೆಲ ತುಳು ಚಿತ್ರಗಳಲ್ಲಿ ಅಭಿನಯಿಸಿರುವ ತುಳು ಚಿತ್ರ ನಟ, ರೌಡಿಶೀಟರ್ ಸುರೇಂದ್ರ ಬಂಟ್ವಾಳ್ ಅವರನ್ನು ಹಾಡುಹಗಲೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬಿ.ಸಿ. ರೋಡ್ನ ಫ್ಲ್ಯಾಟ್ ಒಂದರಲ್ಲಿ ಸುರೇಂದ್ರ ಬಂಟ್ವಾಳ್ ಎಂಬವರ ಹತ್ಯೆ ಮಾಡಲಾಗಿದೆ. ನಗರ ಠಾಣಾ ಪೆÇಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. 2018ರಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಬಂಟ್ವಾಳ ಪೇಟೆಯಲ್ಲಿ ನಡೆದ ತಲವಾರು ದಾಳಿ ಪ್ರಕರಣದಲ್ಲಿ ಸುರೇಂದ್ರ ಬಂಟ್ವಾಳ್ ಹೆಸರು ಕೇಳಿಬಂದಿತ್ತು. ಬಳಿಕ ಅವರನ್ನು ಕಾಸರಗೋಡಿನ ಕುಂಬ್ಳೆ ಬಳಿ ಪೆÇಲೀಸರು ಬಂಧಿಸಿ ಕರೆತಂದಿದ್ದರು. ಈ ಹಿಂದೆ ಬಲಪಂಥೀಯ ಸಂಘಟನೆಯೊಂದಿಗೆ ಗುರುತಿಸಿಕೊಂಡಿದ್ದ ಸುರೇಂದ್ರ ರೌಡಿಶೀಟರ್ ಆಗಿದ್ದು, ಬಳಿಕ ಕಾಂಗ್ರೆಸ್ ಸೇರಿದ್ದರು. ಅವರು ಚಾಲಿಪೆÇೀಲಿಲು ತುಳು ಸಿನಿಮಾದಲ್ಲಿ ನಟಿಸಿದ್ದರು.
ಕಾಲ್ತುಳಿತಕ್ಕೆ 11 ಮಹಿಳೆಯರ ಸಾವು
ಕಾಬೂಲ್, ಅ. 21: ಅಫಘಾನಿಸ್ತಾನದ ಪೂರ್ವ ನಂಗರ್ಹಾರ್ ಪ್ರಾಂತ್ಯದ ರಾಜಧಾನಿಯಾದ ಜಲಾಲಾಬಾದ್ ನಗರದಲ್ಲಿ ಬುಧವಾರ ಕಾಲ್ತುಳಿತ ಸಂಭವಿಸಿದ್ದು, ಕನಿಷ್ಟ 11 ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇಶ ತೊರೆಯಲು ವೀಸಾಗಾಗಿ ಪಾಕಿಸ್ತಾನ ರಾಯಭಾರ ಕಚೇರಿ ಬಳಿ ಸಾವಿರಾರು ಜನ ಸೇರಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿದ್ದು, ಘಟನೆಯಲ್ಲಿ ಹನ್ನೊಂದು ಜನರು ಸಾವನ್ನಪ್ಪಿದ್ದು, 13 ಮಂದಿ ಗಾಯಗೊಂಡಿದ್ದಾರೆ ಎಂದು ಪ್ರಾಂತೀಯ ಸರ್ಕಾರದ ವಕ್ತಾರ ಅಟೌಲಾ ಖೋಗಿಯಾನಿ ತಿಳಿಸಿದ್ದಾರೆ. ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ವೃದ್ಧರಾಗಿದ್ದಾರೆ. ಇವರು ಪಾಕಿಸ್ತಾನಕ್ಕೆ ತೆರಳಲು ವೀಸಾ ಪಡೆಯಲು ಬಂದಿದ್ದರು ಎಂದು ಅವರು ಹೇಳಿದ್ದಾರೆ. ಪ್ರತ್ಯೇಕ ಘಟನೆಯಲ್ಲಿ, ಉತ್ತರ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ನಡೆಸಿದ ದಾಳಿಯಲ್ಲಿ ಕನಿಷ್ಟ 34 ಅಫಘಾನ್ ಪೆÇಲೀಸರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.