ಮಡಿಕೇರಿ, ಅ. 21: ಜಿಲ್ಲೆಯಲ್ಲಿ ಕೋವಿಡ್ ಸಂಬಂಧ ಮತ್ತೊಂದು ಸಾವು ಸಂಭವಿಸಿದ್ದು, ಮೃತರ ಸಂಖ್ಯೆ 64 ಕ್ಕೇರಿದೆ. ಮಡಿಕೇರಿಯ ಮಂಗಳೂರು ರಸ್ತೆ ಬಳಿಯ ನಿವಾಸಿ 41 ವರ್ಷದ ಕೊರೊನಾ ಸೋಂಕಿತ ಪರುಷ ಮೃತರಾಗಿದ್ದಾರೆ.
ಜಿಲ್ಲೆಯಲ್ಲಿ ತಾ. 21 ರಂದು ಹೊಸದಾಗಿ 43 ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ 65,099 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, 4,566 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ 4,029 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 64 ಮಂದಿ ಸಾವನ್ನಪ್ಪಿದ್ದು 473 ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ 75 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, 54 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 344 ಮಂದಿ ಹೋಮ್ ಐಸೋಲೇಷನ್‍ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ 359 ನಿಯಂತ್ರಿತ ವಲಯಗಳಿವೆ.