ಮಡಿಕೇರಿ, ಅ. 21: ಮೈಸೂರು ವಿಶ್ವವಿದ್ಯಾನಿಲಯದ 100ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ದಿಲನ್.ಐ.ಎಂ. ಅವರಿಗೆ ಪಿಎಚ್‍ಡಿ ಪದವಿ ಪ್ರದಾನ ಮಾಡಲಾಯಿತು. ಬೇಟೋಳಿ ಗ್ರಾಮದ ಐನಂಗಡ ಮುತ್ತಣ್ಣ ಮತ್ತು ಸರಸ್ವತಿ ದಂಪತಿಗಳ ಮಗನಾದ ಇವರು ವಿಶ್ರಾಂತ ಕುಲಪತಿಗಳಾದ ಪೆÇ್ರ. ಪದ್ಮಾ ಶೇಖರ್ ಅವರ ಮಾರ್ಗದರ್ಶನದಲ್ಲಿ ವೀರಾಜಪೇಟೆ ತಾಲೂಕು ‘ಸಾಂಸ್ಕøತಿಕ ಅಧ್ಯಯನ’ ಎಂಬ ವಿಷಯದ ಕುರಿತು ಸಂಶೋಧನೆಯನ್ನು ನಡೆಸಿರುತ್ತಾರೆ.

ವೀರಾಜಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜು ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಳೆಯ ವಿದ್ಯಾರ್ಥಿಯಾದ ಇವರು ಪ್ರಸ್ತುತ ವೀರಾಜಪೇಟೆ ಬಾಳುಗೋಡು ಏಕಲವ್ಯ ಮಾದರಿ ವಸತಿ ಶಾಲೆಯ ಕನ್ನಡ ಭಾಷಾ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.