ಮಡಿಕೇರಿ, ಅ. 21: ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಿಸುವ ಸಲುವಾಗಿ ಜಿಲ್ಲಾಡಳಿತ, ಜಿ.ಪಂ., ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಗರ ಪ್ರದೇಶದಲ್ಲಿ ಜನಸಂದಣಿ ಇರುವ ಸ್ಥಳಗಳಲ್ಲಿ ಕೋವಿಡ್-19 ಪ್ರತಿಜ್ಞೆ ಸ್ವೀಕಾರ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ. ಇದರೊಂದಿಗೆ ಸಾಮಾಜಿಕ ಅಂತರ ಕಾಯ್ದು ಕೊಳ್ಳುವುದು, ವೈಯಕ್ತಿಕ ಶುಚಿತ್ವ ಪಾಲನೆ, ಸರಿಯಾದ ಕ್ರಮದಲ್ಲಿ ಮಾಸ್ಕ್ ಧಾರಣೆ, ಸ್ಯಾನಿಟೈಸರ್ ಬಳಕೆಗೆ ಸಂಬಂಧಿಸಿದಂತೆ ಜನರಲ್ಲಿ ಪ್ರತಿನಿತ್ಯ ಜಾಗೃತಿ ಕಾರ್ಯಕ್ರಮವನ್ನು ಏರ್ಪಡಿಸಿ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ.
ಇದರೊಂದಿಗೆ ಆರೋಗ್ಯ ಇಲಾಖೆ ವತಿಯಿಂದ ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ ಮುಂತಾದ ಸ್ಥಳಗಳಲ್ಲಿಯೂ ಸಹ ಜನಜಾಗೃತಿ ಕಾರ್ಯಕ್ರಮ ನಡೆಯುತ್ತಿದೆ. ಗ್ರಾಮ ಪ್ರದೇಶಗಳಲ್ಲಿಯೂ ಸಹ ಅರಿವು ಕಾರ್ಯಕ್ರಮಗಳು ನಡೆಯುತ್ತಿದ್ದು, ಕೋವಿಡ್ ಸಂಬಂಧ ಎಚ್ಚರಿಕೆಯುಳ್ಳ ಕರಪತ್ರ, ಬ್ಯಾನರ್ ಅಳವಡಿಸುವುದು, ಮುಖ್ಯಮಂತ್ರಿ ಅವರ ಸಂದೇಶವನ್ನು ಸಾರ್ವಜನಿಕರಿಗೆ ತಲುಪಿಸುವುದು ಮುಂತಾದ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ. ಇದರೊಂದಿಗೆ ಪ್ರತಿದಿನದ ಐಇಸಿ ಕಾರ್ಯಕ್ರಮದ ಬಗ್ಗೆ ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡ ಲಾಗುತ್ತಿದ್ದು, ಕೋವಿಡ್ ನಿಯಂತ್ರ ಣಕ್ಕಾಗಿ ಕ್ರಮ ಕೈಗೊಳ್ಳಲಾಗುತ್ತಿದೆ.
ವೀರಾಜಪೇಟೆ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ತಿತಿಮತಿಯಲ್ಲಿ ಸಾರ್ವಜನಿಕರಿಗೆ ಕೋವಿಡ್-19 ಬಗ್ಗೆ ಅರಿವು ಮೂಡಿಸಲಾಯಿತು. ಸೋಮವಾರ ಪೇಟೆ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಸುಂಟಿಕೊಪ್ಪದ ಕಂಬಿಬಾಣೆ ಉಪ ಕೇಂದ್ರದಲ್ಲಿ ಲಸಿಕಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಾರ್ವಜನಿಕರಿಗೆ ಕೋವಿಡ್-19 ಬಗ್ಗೆ ಅರಿವು ಮೂಡಿಸಲಾಯಿತು.ಸೋಮವಾರಪೇಟೆ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಕೊಡ್ಲಿಪೇಟೆಯಲ್ಲಿ ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಗೆ ಹಾಗೂ ಸಾರ್ವಜನಿಕರಿಗೆ ಕೋವಿಡ್-19 ಬಗ್ಗೆ ಪ್ರತಿಜ್ಞಾವಿಧಿ ಭೋದಿಸಲಾಯಿತು.
ಮಡಿಕೇರಿ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಚೇರಂಬಾಣೆಯಲ್ಲಿ, ಭಾಗಮಂಡಲದಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ಜಿಲ್ಲಾ ನ್ಯಾಯಾಲಯ ಮಡಿಕೇರಿ, ಇಲ್ಲಿ ಕೋವಿಡ್-19 ಜನಾಂದೋಲನದ ಪ್ರತಿಜ್ಞಾ ಸ್ವೀಕಾರ, ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ದೇವರಾಜ್ ಹೆಚ್.ಜಿ. ಇವರು ನಡೆಸಿದರು. ವೀರಾಜಪೇಟೆ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ತಿತಿಮತಿ, ಮಾಲ್ದಾರೆ ಮತ್ತು ಬಾಳೆಲೆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಕೋವಿಡ್-19 ಬಗ್ಗೆ ಪ್ರತಿಜ್ಞಾವಿಧಿ ಭೋದಿಸಲಾಯಿತು.
ಸೋಮವಾರಪೇಟೆ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ತಿತಿಮತಿ, ಮಾಲ್ದಾರೆ ಮತ್ತು ಬಾಳೆಲೆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ, ವೀರಾಜಪೇಟೆ ತಾಲೂಕಿನಲ್ಲಿ ತೋಟ ಕಾರ್ಮಿಕರಿಗೆ, ಸೋಮವಾರಪೇಟೆ ತಾಲೂಕಿನಲ್ಲಿ ಕಚೇರಿ ಸಿಬ್ಬಂದಿಗಳಿಗೆ ಮತ್ತು ಸಾರ್ವಜನಿಕರಿಗೆ ಕೋವಿಡ್-19 ಬಗ್ಗೆ ಮಾಹಿತಿ ನೀಡಿ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಮಡಿಕೇರಿ ತಾಲೂಕಿನಲ್ಲಿ ಕೋವಿಡ್-19 ಬಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಮೂರ್ನಾಡುವಿನಲ್ಲಿ ಚೇರಂಬಾಣೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಸೋಮವಾರಪೇಟೆ ತಾಲೂಕಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಉಪಕೇಂದ್ರಗಳಲ್ಲಿ ಕೋವಿಡ್-19 ಬಗ್ಗೆ ಮಾಹಿತಿ ನೀಡಿ ಪ್ರತಿಜ್ಞಾವಿಧಿ ಬೋಧಿಸಲಾಯಿತು. ವೀರಾಜಪೇಟೆ ತಾಲೂಕಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಶ್ರೀಮಂಗಲದಲ್ಲಿ ಕೋವಿಡ್-19 ಬಗ್ಗೆ ಮಾಹಿತಿ ನೀಡಿ ಪ್ರತಿಜ್ಞಾವಿಧಿ ಬೋಧಿಸಲಾಯಿತು.