ಮಡಿಕೇರಿ, ಅ.21 : ಕುಶಾಲನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ವ್ಯಾಪಾರಿಗಳು ಮತ್ತು ವರ್ತಕರ ಸಂಘದ ಅಧ್ಯಕ್ಷ ಡಿ.ಎಸ್.ಮಹೇಶ್ ಹಾಗೂ ಸಂಘದ ನಿರ್ದೇಶಕ ರಂಗಸ್ವಾಮಿ ಅವರುಗಳು ಬಿಜೆಪಿ ತೊರೆದು ಜಿಲ್ಲಾ ಜಾತ್ಯತೀತ ಜನತಾದಳ ಪಕ್ಷಕ್ಕೆ ಸೇರ್ಪಡೆಗೊಂಡರು.

ಕುಶಾಲನಗರದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಅವರು ಮಹೇಶ್ ಮತ್ತು ರಂಗಸ್ವಾಮಿ ಅವರನ್ನು ಪಕ್ಷದ ಶಾಲು ಹೊದಿಸಿ, ಧ್ವಜ ನೀಡಿ ಬರಮಾಡಿಕೊಂಡರು.