ಕಣಿವೆ, ಅ. 21: ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆ ಪೂರ್ವ ಸಿದ್ಧತೆಯಾಗಿ ಮುಳ್ಳುಸೋಗೆ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಸಭೆ ನಡೆಯಿತು. ಬಿಜೆಪಿ ಮುಖಂಡ ಎಂ.ಎಸ್. ಶಿವಾನಂದ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಆರ್. ಮಂಜುಳಾ, ಕಾರ್ಯಕರ್ತರು, ಪ್ರತೀ ಮತದಾರರ ಮನೆ ಬಾಗಿಲಿಗೆ ತೆರಳಿ ಸರ್ಕಾರದ ಸೇವೆಗಳ ಬಗ್ಗೆ ಮಾಹಿತಿ ನೀಡುವ ಮತ್ತು ತಲುಪಿಸುವ ಕೆಲಸ ಮಾಡಬೇಕು ಎಂದರು.
ಶಕ್ತಿ ಕೇಂದ್ರದ ಅಧ್ಯಕ್ಷ ನಿವೃತ್ತ ಪೆÇಲೀಸ್ ಅಧಿಕಾರಿ ಗಣಪತಿ, ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಎಸ್. ಶಿವಾನಂದ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಗಣಿಪ್ರಸಾದ್, ಚೆಲುವರಾಜು, ಮಣಿ, ಎಂ.ಎಸ್. ಕುಮಾರ್ ಮೊದಲಾದವರಿದ್ದರು.