ಕೂಡಿಗೆ, ಅ. 21: ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿದ್ದಲಿಂಗಪುರ ಗ್ರಾಮದ ಉಪ ರಸ್ತೆಗಳು ತೀರಾ ಹಾಳಾಗಿದ್ದು ದ್ವಿಚಕ್ರ ವಾಹನಗಳ ಸಂಚಾರಕ್ಕೆ ಸಾಧ್ಯವಾಗದಷ್ಟು ಗುಂಡಿಗಳಾಗಿವೆ. ಈ ವ್ಯಾಪ್ತಿಯ ಗ್ರಾಮಸ್ಥರು ಅನೇಕ ಬಾರಿ ಗ್ರಾಮ ಪಂಚಾಯಿತಿಗೂ ಮತ್ತು ಸಂಬಂಧಿಸಿದ ಇಲಾಖೆಯವರಿಗೆ ರಸ್ತೆ ದುರಸ್ತಿ ಮಾಡುವಂತೆ ಮನವಿ ಸಲ್ಲಿಸಿದ್ದಾರೆ. ಆದರೆ ಇದುವರೆಗೂ ಯಾವುದೇ ಕಾಮಗಾರಿಗಳು ನಡೆದಿಲ್ಲ ಎಂದು ಸಿದ್ದಲಿಂಗಪುರ ಗ್ರಾಮಸ್ಥರ ಆರೋಪವಾಗಿದೆ. ಸಂಬಂಧಿಸಿದ ಇಲಾಖೆಯವರು ತಕ್ಷಣ ಸ್ಥಳ ಪರಿಶೀಲನೆ ನಡೆಸಿ ರಸ್ತೆ ದುರಸ್ತಿಗೊಳಿಸುವಂತೆ ಆಗ್ರಹಿಸಿದ್ದಾರೆ.