ಶನಿವಾರಸಂತೆ, ಅ. 22: ನಿಡ್ತ ಪಂಚಾಯಿತಿ ವ್ಯಾಪ್ತಿಯ ಮಾದೇಗೋಡು ಗ್ರಾಮದ ಶ್ರೀಧರ್ ಅವರ ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿರುವ ಕೂಲಿಕಾರ್ಮಿಕ ರಾಮು (46) ಅವರು ತಾ. 17 ರಂದು ಆಕಸ್ಮಿಕವಾಗಿ ಮಾದೇಗೋಡು ಗ್ರಾಮದ ಹೊಳೆಯಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟ ಪ್ರಕರಣ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಮಗ ರಾಮು ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿರುತ್ತಾರೆ ಎಂದು ತಂದೆ ಬಾಬು ಶನಿವಾರಸಂತೆ ಪೊಲೀಸ್ ಠಾಣೆಗೆ ದೂರು ನೀಡಿರುತ್ತಾರೆ. ಸ್ಥಳಕ್ಕೆ ಸಹಾಯಕ ಠಾಣಾಧಿಕಾರಿ ಹೆಚ್.ಎಂ. ಗೋವಿಂದ್ ಭೇಟಿ ನೀಡಿ ಪರಿಶೀಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿ ಮೃತದೇಹವನ್ನು ಪರೀಕ್ಷೆಗೆ ಒಳಪಡಿಸಿ ವಾರಿಸುದಾರರಿಗೆ ಒಪ್ಪಿಸಿದ್ದಾರೆ.