ಗೋಣಿಕೊಪ್ಪ ವರದಿ, ಅ. 22: ತಿತಿಮತಿ ವಿವೇಕಾನಂದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛ ಭಾರತ ಮಿಷನ್, ತಿತಿಮತಿ ಗ್ರಾಮ ಪಂಚಾಯಿತಿ ವತಿಯಿಂದ ನಿತ್ಯೋತ್ಸವ ಮಾಸಿಕ ಆಚರಣೆ ನಡೆಯಿತು. ಗರ್ಭಿಣಿ, ಬಾಣಂತಿಯರಿಗೆ ಪೌಷ್ಟಿಕ ಆಹಾರದ ಬಗ್ಗೆ ಜಾಗೃತಿ ಮೂಡಿಸಲಾಯಿತು. ಮಾತೃಪೂರ್ಣ ಯೋಜನೆಯನ್ನು ಪಡೆದುಕೊಂಡು, ಆರೋಗ್ಯ ಇಲಾಖೆಯ ಹಲವು ಯೋಜನೆಗಳನ್ನು ಬಳಸಿಕೊಳ್ಳಲು ಸಲಹೆ ನೀಡಲಾಯಿತು. ತಿತಿಮತಿ ವಿವೇಕಾನಂದ ಪ್ರಾಥಮಿಕ ಆರೋಗ್ಯ ಕೇಂದ್ರ ಅಧಿಕಾರಿ ಡಾ. ಹೊಸಮನಿ ಅವರು ಆರೋಗ್ಯ ಕಾಪಾಡಿಕೊಳ್ಳುವ ಬಗ್ಗೆ ಸಲಹೆ ನೀಡಿದರು. ಸ್ವಚ್ಛ ಭಾರತ ಕಾರ್ಯಕ್ರಮದಡಿ ಆವರಣದಲ್ಲಿ ಸ್ವಚ್ಛತೆ ಮಾಡಲಾಯಿತು. ತಿತಿಮತಿ ವೃತ್ತದ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಪಾಲ್ಗೊಂಡರು. ಸುಮಾರು 5 ಗರ್ಭಿಣಿಯರಿಗೆ ಸೀಮಂತ ಕಾರ್ಯ ನಡೆಯಿತು. ಕೊರೊನಾ ಬಗ್ಗೆ ಜನಾಂದೋಲನದ ಮೂಲಕ ಜಾಗೃತಿ ಮೂಡಿಸಲಾಯಿತು. ತಾಲೂಕು ಪಂಚಾಯಿತಿ ಸದಸ್ಯೆ ಆಶಾ ಜೇಮ್ಸ್, ಬಿಎಚ್‍ಇಒ ಶಿವಯ್ಯ, ತಿತಿಮತಿ ಗ್ರಾಮ ಪಂಚಾಯಿತಿ ಪಿಡಿಒ ಮಮತಾ, ಅಂಗನವಾಡಿ ಕಾರ್ಯಕರ್ತೆ ಸರೋಜಾ ಇದ್ದರು.