ಕೂಡಿಗೆ, ಅ. 22: ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವತಿಯಿಂದ ಗ್ರಾ.ಪಂ. ವ್ಯಾಪ್ತಿಯ ಗೊಂದಿಬಸನವಹಳ್ಳಿ ಗ್ರಾಮದಲ್ಲಿ ಬಚ್ಚಲುಗುಂಡಿ ಅಭಿಯಾನ ಕಾರ್ಯಕ್ರಮ ನಡೆಯಿತು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯ ಸೂಚನೆಯಂತೆ ಗ್ರಾಮ ಮಟ್ಟದಲ್ಲಿ ಗ್ರಾಮಸ್ಥರು ತಮ್ಮ ಮನೆಗಳಲ್ಲಿ ಬಚ್ಚಲು ನೀರು ನಿರುಪಯುಕ್ತವಾಗದಂತೆ ಆ ನೀರನ್ನು ಇಂಗು ಗುಂಡಿ ನಿರ್ಮಾಣ ಮಾಡುವ ಮೂಲಕ ತಮ್ಮ ಮನೆಯ ತೋಟಗಳಿಗೆ ಬಳಕೆ ಮಾಡಿಕೊಳ್ಳಲು ಅನುಕೂಲವಾಗುವಂತೆ ಮಾಡಲು ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಅವಕಾಶವಿರುವುದರಿಂದ ಇದರ ಸದುಪಯೋಗ ಪಡೆದುಕೊಳ್ಳುವಂತೆ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಮೇಶ್ ಮನವಿ ಮಾಡಿದ್ದಾರೆ.