ಮಡಿಕೇರಿ, ಅ. 22: ಎಸ್‍ಸಿಪಿ ಮತ್ತು ಟಿಎಸ್‍ಪಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿರುವ ವಿವಿಧ ಇಲಾಖೆಗಳು ವೈಯಕ್ತಿಕ ಸೌಲಭ್ಯ ಗಳನ್ನು ಪಡೆದ ಫಲಾನುಭವಿಗಳ ವಿವರ ಹಾಗೂ ಕಾಮಗಾರಿಗಳ ವಿವರವನ್ನು ತಂತ್ರಾಂಶದಲ್ಲಿ ಅಳವಡಿಸುವ ಸಂಬಂಧ ವಿವಿಧ ಇಲಾಖಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ ನಡೆಯಿತು.

ನಗರದ ಜಿ.ಪಂ. ವೀಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ನಡೆದ ತರಬೇತಿ ಕಾರ್ಯಾಗಾರದಲ್ಲಿ ಎಸ್‍ಸಿಪಿ ಮತ್ತು ಟಿಎಸ್‍ಪಿ ಯೋಜನೆಯನ್ನು ಪಾರದರ್ಶಕವಾಗಿ ಜಾರಿಗೊಳಿಸುವ ಸಂಬಂಧ ಮತ್ತು ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ತಂತ್ರಾಂಶದ ಮೂಲಕ ಮಾಹಿತಿ ಯನ್ನು ಒದಗಿಸುವ ಕುರಿತು ಮಾಹಿತಿ ನೀಡಲಾಯಿತು. ಜೊತೆಗೆ ಎಸ್‍ಸಿಪಿ ಮತ್ತು ಟಿಎಸ್‍ಪಿ ಅಧಿನಿಯಮ 2013 ಮತ್ತು ನಿಯಮಗಳು, 2017 ರ ಪ್ರಮುಖ ಅಂಶಗಳು, ಈ ಯೋಜನೆಯಡಿಯಲ್ಲಿ ಸೌಲಭ್ಯ ಪಡೆದ ಫಲಾನುಭವಿಗಳ ವಿವರವನ್ನು ಬೆನಿಫಿಶರಿ ಅಪ್ಲಿಕೇಶನ್‍ನಲ್ಲಿ ಅಪೆÇ್ಲೀಡ್ ಮಾಡುವ ವಿಧಾನ ಮತ್ತು ಅನುಷ್ಠಾನ ಮಾಡಿರುವ ಕಾಮಗಾರಿಗಳ ವಿವರವನ್ನು ವರ್ಕ್ ಮಾನಿಟರಿಂಗ್ ಸಿಸ್ಟಮ್‍ನಲ್ಲಿ ಅಪೆÇ್ಲೀಡ್ ಮಾಡುವ ಬಗ್ಗೆ ಅಧಿಕಾರಿಗಳಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ತರಬೇತಿ ನೀಡಲಾಯಿತು. ಜಿ.ಪಂ. ಯೋಜನಾ ನಿರ್ದೇಶಕ ಶ್ರೀಕಂಠಮೂರ್ತಿ, ಐಟಿಡಿಪಿ ಇಲಾಖಾಧಿಕಾರಿ ಶಿವ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಭಾರತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಅರುಂಧತಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಆನಂದ್, ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ಪಶು ಸಂಗೋಪನೆ ಇಲಾ ಖೆಯ ಉಪ ನಿರ್ದೇಶಕ ಸುರೇಶ್ ಭಟ್, ತಮ್ಮಯ್ಯ, ನಗರಸಭೆ ಪೌರಾ ಯುಕ್ತ ರಾಮದಾಸ್ ಇತರರು ಇದ್ದರು.