ಕೂಡಿಗೆ, ಅ. 22: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರಂಗಿಯಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಸ್ವಚ್ಛ ಉತ್ಸವ ನಿತ್ಯೋತ್ಸವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ವರದ್‍ರಾಜ್ ನೆರವೇರಿಸಿದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ್, ಸ್ಥಳೀಯ ಗ್ರಾಮಸ್ಥರು ಮತ್ತು ಮಾಜಿ ಸದಸ್ಯರು, ಸಿಬ್ಬಂದಿ ವರ್ಗದವರು ಹಾಜರಿದ್ದರು.